ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ನಾರಾಯಣಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ಛೋಟೆ ಡೊಂಗರ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮದಾಯಿ ಘಾಟಿ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗಳ ಮೇಲೆ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ.
ಪರಿಣಾಮ ಘಟನೆಯಲ್ಲಿ ಸಿಎಎಫ್‌ನ 9ನೇ ಬೆಟಾಲಿಯನ್‌ಗೆ ಸೇರಿದ ಕಾನ್‌ಸ್ಟೆಬಲ್ ಕಮಲೇಶ್ ಸಾಹು ಎಂಬುವವರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಪೇದೆ ವಿನಯ್ ಕುಮಾರ್ ಸಾಹು ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಗೊಂಡಿರುವ ವಿನಯ್ ಅವರನ್ನು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಸ್ಥಳವನ್ನು ಸುತ್ತುವರೆದಿರುವ ಭದ್ರತಾಪಡೆಗಳು ಅಡಗಿ ಕುಳಿತಿರುವ ನಕ್ಸಲರಿಗಾಗಿ ಎನ್ಕೌಂಟರ್ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


