ಮಧ್ಯ ಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಸೇರಿ ಹಲವರು ಭಾಗಿ
ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು.

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಮುನ್ನಡೆಸುತ್ತಿರುವ ರೀತಿಯಲ್ಲಿಯೇ ರಾಜ್ಯವೂ ಹೆಜ್ಜೆ ಹಾಕಲಿದೆ ಎಂದು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಮೋಹನ್ ಯಾದವ್ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಮುನ್ನಡೆಸುತ್ತಿರುವ ರೀತಿಯಲ್ಲಿಯೇ ಅಭಿವೃದ್ಧಿಯಲ್ಲಿ ಮಧ್ಯಪ್ರದೇಶವು ಹೆಜ್ಜೆಗಳನ್ನು ಅನುಸರಿಸುತ್ತದೆ, ನಾನು ರಾಜ ವಿಕ್ರಮಾದಿತ್ಯನ ನೆಲದಿಂದ ಬಂದಿದ್ದೇನೆ. ರಾಜ್ಯದ ಪ್ರಗತಿಗೆ ಬದ್ಧನಾಗಿರುತ್ತೇನೆ. ಮಧ್ಯಪ್ರದೇಶದ ಕೋಟ್ಯಂತರ ನಾಗರಿಕರ ಆಕಾಂಕ್ಷೆಗಳನ್ನು ಈಡೇರಿಸುತ್ತೇನೆ. ರಾಜ ವಿಕ್ರಮಾದಿತ್ಯನ ಆಳ್ವಿಕೆಯಲ್ಲಿ ಇದ್ದ ಅದೇ ಉತ್ತಮ ಆಡಳಿತವನ್ನು ಜನರು ನಿರೀಕ್ಷಿಸಬಹುದು ಎಂದು ಮೋಹನ್ ಯಾದವ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ರಾಜೇಂದ್ರ ಶುಕ್ಲ ಹಾಗೂ ಜಗದೀಶ್ ದೇವ್ಡ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


