ಸಂಸತ್ ನಲ್ಲಿ ಭದ್ರತಾ ಲೋಪ: ಆರೋಪಿ ನೀಲಂ INDIA ಒಕ್ಕೂಟದ ಬೆಂಬಲಿಗರು- ಬಿಜೆಪಿ ಐಟಿ ಸೆಲ್
ಲೋಕಸಭೆಯಲ್ಲಿ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನೀಲಂ ಆಜಾದ್ ಇಂಡಿಯಾ ಒಕ್ಕೂಟದ ಬೆಂಬಲಿಗರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಆರೋಪಿ ನೀಲಂ ಆಜಾದ್ ಇಂಡಿಯಾ ಒಕ್ಕೂಟದ ಬೆಂಬಲಿಗರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಂಧಿತ ಮಹಿಳೆ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವಂತೆ ಕಂಡುಬರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. "ಆಡಳಿತ ಬದಲಾವಣೆ ಕಾಂಗ್ರೆಸ್ ನಾಯಕರು ಆಗಾಗ್ಗೆ ಬಳಸುವ ನುಡಿಗಟ್ಟು ಎಂದಿದ್ದಾರೆ.
ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿದ ಮಹಿಳೆ ನೀಲಂ ಆಜಾದ್ ಕಾಂಗ್ರೆಸ್, ಇಂಡಿಯಾ ಒಕ್ಕೂಟದ ಬೆಂಬಲಿಗರಾಗಿದ್ದಾರೆ. ಅವರು ಆಂದೋಲಂಜೀವಿ, ಅವರು ಹಲವಾರು ಪ್ರತಿಭಟನೆಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
"ಅವರನ್ನು ಯಾರು ಕಳುಹಿಸಿದ್ದಾರೆ ಎಂಬುದು ಪ್ರಶ್ನೆಯಾಗಿದೆ. ಬಿಜೆಪಿ ಸಂಸದರಿಂದ ಸಂಸತ್ತಿನ ಪಾಸ್ ಪಡೆಯಲು ಅವರು ಮೈಸೂರನ್ನು ಏಕೆ ಆಯ್ಕೆ ಮಾಡಿದರು. ನೆನಪಿಡಿ ಪ್ರತಿಪಕ್ಷಗಳು, ನಮ್ಮ ಪ್ರಜಾಪ್ರಭುತ್ವದ ಅತ್ಯುನ್ನತ ಸಂಸ್ಥೆಯಾದ ಸಂಸತ್ ಅಪವಿತ್ರ ಸೇರಿದಂತೆ ಯಾವುದಕ್ಕೂ ತಲೆಕೆಡಿಸಿಕೊಡುವುದಿಲ್ಲ ಎಂದು ಆರೋಪಿಸಿದ್ದಾರೆ.
ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಮತ್ತೊಬ್ಬ ಆರೋಪಿ ಮನೋರಂಜನ್ ಅವರ ತಂದೆಯ ವೀಡಿಯೊವನ್ನು ಟ್ಯಾಗ್ ಮಾಡುವ ಪ್ರತ್ಯೇಕ ಪೋಸ್ಟ್‌ನಲ್ಲಿ, ಮನೋರಂಜನ್ ಕಾಂಗ್ರೆಸ್ ಥವಾ ಎಸ್‌ಎಫ್‌ಐ ಪ್ರಾಯೋಜಿತ ಚಳುವಳಿಗಳಲ್ಲಿ ಸಕ್ರಿಯರಾಗಿದ್ದಾರಾ? ಅವರು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದೀರಾ? ಇದರ ಬಗ್ಗೆ ಅಂತಿಮ ಮಾತು ಇನ್ನೂ ಹೊರಬಿದ್ದಿಲ್ಲ. ಆದರೆ ಒಂದು ವಿಷಯ ಸ್ಪಷ್ಟವಾಗಿದೆ. ವಿರೋಧ ಪಕ್ಷಗಳು ಡಿಸೆಂಬರ್ 13 ರಂದು ಸಂಸತ್ತನ್ನು ಒಂದು ಉದ್ದೇಶದಿಂದ ಅಪವಿತ್ರಗೊಳಿಸಿತು ಎಂದು ಅವರು ಆರೋಪಿಸಿದ್ದಾರೆ.
ಮತ್ತೊಂದೆಡೆ ಅಮಿತ್ ಮಾಳವಿಯಾ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಬಿಜೆಪಿ ಐಟಿ ಸೆಲ್ 2 ಸಂಗತಿಗಳಿಂದ ಗಮನ ಸೆಳೆಯಲು ತೀವ್ರವಾಗಿ ಬಯಸಿದೆ .
1. ಸಂಸತ್ತಿನ ಭದ್ರತೆಯಲ್ಲಿ ಬಹಳ ಗಂಭೀರವಾದ ಉಲ್ಲಂಘನೆಯಾಗಿದೆ. 2. ಆಘಾತಕಾರಿ ರೀತಿಯಲ್ಲಿ ಲೋಕಸಭೆಯ ಭದ್ರತೆಯನ್ನು ಉಲ್ಲಂಘಿಸಿ ಒಳನುಗ್ಗಿದವರು ಮೈಸೂರಿನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಂದ ಪ್ರವೇಶ ಪಾಸ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


