ಸುಪ್ರೀಂ ಕೋರ್ಟ್ ನಲ್ಲಿ 80 ಸಾವಿರ ಸೇರಿ ವಿವಿಧ ಕೋರ್ಟ್ ಗಳಲ್ಲಿ 5 ಕೋಟಿಗೂ ಹೆಚ್ಚು ಪ್ರಕರಣ ಬಾಕಿ: ಕೇಂದ್ರ
ಸುಪ್ರೀಂ ಕೋರ್ಟ್ನಲ್ಲಿ 80,000 ಪ್ರಕರಣಗಳು ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ಐದು ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.

ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ 80,000 ಪ್ರಕರಣಗಳು ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ಐದು ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ಮಾಹಿತಿ ನೀಡಿದೆ.
ಇಂದು ಲೋಕಸಭೆಗೆ ಲಿಖಿತ ಉತ್ತರ ನೀಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು, ಡಿಸೆಂಬರ್ 1 ರವರೆಗೆ ಬಾಕಿ ಉಳಿದಿರುವ 5,08,85,856 ಪ್ರಕರಣಗಳಲ್ಲಿ 61 ಲಕ್ಷಕ್ಕೂ ಹೆಚ್ಚು ಪ್ರಕರಣಗಳು 25 ಹೈಕೋರ್ಟ್ಗಳ ಮಟ್ಟದಲ್ಲಿವೆ ಎಂದು ಹೇಳಿದರು.
ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4.46 ಕೋಟಿ ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ನ್ಯಾಯಾಂಗದ ಒಟ್ಟಾರೆ ಅನುಮೋದಿತ ನ್ಯಾಯಾಧೀಶರ ಸಂಖ್ಯೆ 26,568 ಎಂದು ಸಚಿವರು ಮಾಹಿತಿ ನೀಡಿದರು.
ಸುಪ್ರೀಂ ಕೋರ್ಟ್ನ ಅನುಮೋದಿತ ನ್ಯಾಯಾಧೀಶರ ಸಂಖ್ಯಾಬಲ 34 ಆಗಿದ್ದರೆ, ಹೈಕೋರ್ಟ್ಗಳ ಅನುಮೋದಿತ ನ್ಯಾಯಾಧೀಶರ ಬಲ 1,114 ಇದೆ ಎಂದು ಕೇಂದ್ರ ಕಾನೂನು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


