ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯಸ್ಮರಣೆ: ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಕೆ
ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ದೇಶದ ಮೊದಲ ಉಪಪ್ರಧಾನಿ, ಆಧುನಿಕ ಭಾರತದ ನಿರ್ಮಾತೃ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ಸ್ಮರಣೆಯ ದಿನವಾದ ಇಂದು (ಡಿ.15) ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವಾರು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನಗಳು. ಅವರ ದೂರದೃಷ್ಟಿಯ ನಾಯಕತ್ವ, ರಾಷ್ಟ್ರದ ಏಕತೆಗಾಗಿ ಅವರ ಬದ್ಧತೆಯು ಆಧುನಿಕ ಭಾರತ ನಿರ್ಮಾಣಕ್ಕೆ ನಾಂದಿ ಹಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅವರ ಅನುಕರಣೀಯ ಕೆಲಸವು ನಮಗೆ ಶಕ್ತಿ. ನಾವು ಅವರ ಜೀವನದಿಂದ ಸ್ಫೂರ್ತಿಯನ್ನು ಪಡೆಯುವುದನ್ನು ಮುಂದುವರಿಸುತ್ತೇವೆ ಮತ್ತು ಅವರ ಸಮೃದ್ಧ ಭಾರತದ ಕನಸನ್ನು ನನಸಾಗಿಸಲು ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
ರಾಷ್ಟ್ರೀಯ ಏಕತೆಯ ಶಿಲ್ಪಿ, ನವಭಾರತದ ಉಕ್ಕಿನ ಮನುಷ್ಯ, ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಪುಣ್ಯತಿಥಿಯಂದು ಗೌರವ ನಮನಗಳು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


