ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 6 ಮಂದಿ ದುರ್ಮರಣ
ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.

ನಾಗ್ಪುರ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಮಯೂರ್ ಇಂಗಳೆ (22), ವೈಭವ್ ಚಿಖಲೆ (32), ಸುಧಾಕರ್ ಮಾನಕರ್ (42), ವಿಠ್ಠಲ್ ತೋಟೆ (45), ಅಜಯ್ ಚಿಖಲೆ (40) ಮತ್ತು ರಮೇಶ ಹಲೊಂಡೆ ಎಂದು ಗುರುತಿಸಲಾಗಿದೆ. ಜಗದೀಶ್ ಧೋನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರೆಲ್ಲರೂ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಮೆಂಡಿಪಥರ್ ಗ್ರಾಮದವರು ಎಂದು ತಿಳಿದು ಬಂದಿದೆ.
ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಏಳು ಮಂದಿ ಪ್ರಯಾಣಿಸುತ್ತಿದ್ದಾಗ ಸೋಂಖಾಂಬ್ ಮತ್ತು ತಾರಾಬೋಡಿ ಗ್ರಾಮಗಳ ಮಧಅಯೆ ಟ್ರಕ್‌ಗೆ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ.
ಮತ್ತೊಂದೆಡೆ, ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿದ್ದಾರೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ನಾಗ್ಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಜಗದೀಶ್ನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


