ದೇಶ

ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು

ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು
ಬಸ್-ಆಟೋ ಅಪಘಾತ
Published On :

ಮಲಪ್ಪುರಂ: ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ  ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ.

ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕ ಅಬ್ದುಲ್ ಮಜೀದ್ (50) ಮತ್ತು ಪ್ರಯಾಣಿಕರಾದ ಥೆಸ್ಲೀಮಾ (34) ಮುಹ್ಸಿನಾ (32) ಮತ್ತು ಅವರ ಮಕ್ಕಳಾದ ರೈಹಾ ಫಾತಿಮಾ (4) ಮತ್ತು ರಿನ್ಶಾ ಫಾತಿಮಾ (7) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ದೇಹಗಳನ್ನು ಮಂಚೇರಿ ವೈದ್ಯಕೀಯ ಕಾಲೇಜಿನಲ್ಲಿ ಇರಿಸಲಾಗಿದೆ.

ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥ ಶಶಿಧರನ್ ಎಸ್, ಮೋಟಾರು ವಾಹನ ಇಲಾಖೆಯೊಂದಿಗೆ ಪೊಲೀಸರು ಜಂಟಿ ತನಿಖೆ ನಡೆಸಲಿದ್ದಾರೆ. ಅಪಘಾತ ಸ್ಥಳವನ್ನು ಸರಿಯಾಗಿ ಪರಿಶೀಲಿಸಿ ರಸ್ತೆಯಲ್ಲಿ ಏನಾದರೂ ಸಮಸ್ಯೆಗಳಿವೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ. ಮುಂದೆ ಇಂತಹ ಅಪಘಾತಗಳು ಸಂಭವಿಸದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಘಟನೆಯಲ್ಲಿ ಐವರು ಶಬರಿಮಲೆ ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.