ಲೋಕಸಭೆ ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್
ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ನವದೆಹಲಿ: ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರನ್ನು ವಿಚಾರಣೆಗೊಳಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ಇಂದು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ, ಈ ಪ್ರಕರಣದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಾಂಗ್ರೆಸ್ ನಾಯಕರು ಬೇಕೆಂದೇ ಷಡ್ಯಂತ್ರ ನಡೆಸಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಮಾತುಗಳು ಕೇಳಿಬರುತ್ತಿವೆ. ಇದನ್ನೇ ಮುಂದಿಟ್ಟುಕೊಂಡು ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ಮಾಡಿಸಿ ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗಿದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ಮಗ ಲೋಕಸಭೆಗೆ ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಮಗನನ್ನು ಗೆಲ್ಲಿಸಲು ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಭಾರತ್ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ. ಸಂಸತ್ನಲ್ಲಿ ಗಲಾಟೆಯಾದ 15 ನಿಮಿಷದಲ್ಲೇ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಇದರಿಂದಲೇ ಗೊತ್ತಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


