ಸಂಸತ್ತು ಭದ್ರತೆ ಉಲ್ಲಂಘನೆ ಪ್ರಕರಣ ಗಂಭೀರ, ಆದರೆ ವಿರೋಧ ಪಕ್ಷಗಳು ರಾಜಕೀಯ ಮಾಡಬಾರದು: ಅಮಿತ್ ಶಾ
ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಮೊನ್ನೆ ಬುಧವಾರ ನಡೆದ ಭದ್ರತಾ ಲೋಪವು ಗಂಭೀರ ಪ್ರಕರಣವಾಗಿದೆ ಎಂದು ಒಪ್ಪಿಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಘಟನೆಯ ತನಿಖೆಗಾಗಿ ರಚಿಸಲಾದ ಸಮಿತಿಯು ತನ್ನ ವರದಿಯನ್ನು 15-20 ದಿನಗಳಲ್ಲಿ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಆದರೆ, ಪ್ರತಿಪಕ್ಷಗಳು ಈ ಘಟನೆಯನ್ನು ರಾಜಕೀಯಗೊಳಿಸಬಾರದು. ಭದ್ರತಾ ಲೋಪ ಗಂಭೀರ ವಿಷಯ. ಲೋಕಸಭೆ ಸ್ಪೀಕರ್ ಇದನ್ನು ಮನಗಂಡಿದ್ದಾರೆ. ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ನಾನು ಉಲ್ಲಂಘನೆಯನ್ನು ನಿರಾಕರಿಸುವುದಿಲ್ಲ, ಇದು ಉಲ್ಲಂಘನೆಯಾಗಿದ್ದು, ಖಂಡಿತಾ ಗಂಭೀರ ಪ್ರಕರಣ, ಆದರೆ ಅದನ್ನು ರಾಜಕೀಯಗೊಳಿಸಬಾರದು ಎಂದು ಕೇಳಿಕೊಂಡರು.
ಲೋಕಸಭೆಯ ಭದ್ರತೆ ಸ್ಪೀಕರ್ ಅವರ ಅಧೀನದಲ್ಲಿದೆ ಎಂಬುದು ಎಲ್ಲರಿಗೂ ಗೊತ್ತು. ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದು, ನಾವು ದೇಶದ ಹಿರಿಯ ಡಿಜಿಪಿ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೇವೆ. ಇತರ ಏಜೆನ್ಸಿಗಳ ಪ್ರತಿನಿಧಿಗಳು ಸಹ ಸಮಿತಿಯ ಭಾಗವಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಸ್ಪೀಕರ್‌ಗೆ ವರದಿ ಬರಲಿದೆ. ಸ್ಪೀಕರ್ ವರದಿಯನ್ನು ಬಿಡುಗಡೆ ಮಾಡಿದರೆ ಅದು ಸೂಕ್ತ ಎಂದು ನಾನು ಭಾವಿಸುತ್ತೇನೆ ಎಂದು ಅಮಿತ್ ಶಾ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


