ಬಿಹಾರ: ದೇವಾಲಯದ ಸಿಬ್ಬಂದಿ ಶವ ಪತ್ತೆಯಾದ ನಂತರ ಉದ್ವಿಗ್ನತೆ
ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಪಾಲ್ ಗಂಜ್: ವಾರದ ಹಿಂದೆ ನಾಪತ್ತೆಯಾಗಿದ್ದ ದೇವಾಲಯವೊಂದರ ಸಿಬ್ಬಂದಿಯ ಶವ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಗ್ರಾಮವೊಂದರ ಹೊರವಲಯದಲ್ಲಿ ವಿಕೃತ ಸ್ಥಿತಿಯಲ್ಲಿ ಪತ್ತೆಯಾದ ನಂತರ ಭಾನುವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಮನೋಜ್ ಕುಮಾರ್ ಸಾಹ್ ಎಂದು ಗುರುತಿಸಲಾಗಿದೆ. ಸೋಮವಾರದಂದು ದಾನಪುರ ಪ್ರದೇಶದ ಮಂಜಾ ಗ್ರಾಮದ ದೇವಸ್ಥಾನದಿಂದ ಹೊರಗೆ ಹೋಗುವಾಗ ಕೊನೆಯದಾಗಿ ಕಾಣಿಸಿಕೊಂಡಿದ್ದ ಈತನ ಶವ ಶನಿವಾರ ಪತ್ತೆಯಾಗಿದೆ ಎಂದು ಗೋಪಾಲಗಂಜ್ ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ್ ಪ್ರಭಾತ್ ತಿಳಿಸಿದ್ದಾರೆ.
ಈತ ದೇವಸ್ಥಾನದ ಅರ್ಚಕ ಎಂಬ ವದಂತಿ ಹರಡುತ್ತಿದೆ. ಈತ ದೇವಸ್ಥಾನದ ಆವರಣದೊಳಗೆ ಮಲಗುತ್ತಿದ್ದ. ಸೋಮವಾರ ರಾತ್ರಿ ದೇವಸ್ಥಾನದ ಗೇಟ್‌ಗೆ ಬೀಗ ಹಾಕಿ ಹೊರಗೆ ಹೋಗುತ್ತಿರುವುದನ್ನು ಕೊನೆಯದಾಗಿ ನೋಡಿದ್ದಾಗಿ ಸ್ಥಳೀಯರು ಹೇಳುತ್ತಾರೆ. ಹೆಚ್ಚಿನ ವಿವರ ತನಿಖೆಯ ನಂತರ ಗೊತ್ತಾಗಿದೆ ಎಂದು ಪ್ರಭಾತ್ ಹೇಳಿದ್ದಾರೆ.
ದೇಹದ ಮೇಲೆ ಗುಂಡಿನ ಗಾಯಗಳು, ಕಣ್ಣುಗಳು ಮಾಯ, ಖಾಸಗಿ ಭಾಗಗಳ ಮೇಲೆ ಗಾಯಗಳ ವರದಿ ಕುರಿತು ಉತ್ತರಿಸಿದ ಎಸ್ಪಿ, ಮರಣೋತ್ತರ ಪರೀಕ್ಷೆಯ ವರದಿ ನಂತರ ಎಲ್ಲಾವೂ ತಿಳಿದುಬರಲಿದೆ. ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


