Gyanvapi Survey: ನ್ಯಾಯಾಲಯಕ್ಕೆ ಮಸೀದಿ ಸರ್ವೆ ವರದಿ ಸಲ್ಲಿಸಿದ ಪುರಾತತ್ವ ಇಲಾಖೆ
ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.

ನವದೆಹಲಿ: ವಾರಾಣಸಿಯ ವಿವಾದಿತ ಜ್ಞಾನವಾಪಿ ಮಸೀದಿ ಸಮೀಕ್ಷೆ (Gyanvapi Mosque Survey) ವರದಿಯನ್ನು ಉತ್ತರ ಪ್ರದೇಶದ ವಾರಾಣಸಿಯ ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಲಾಗಿದೆ.
ಸಂಪೂರ್ಣವಾಗಿ ಸೀಲ್ ಮಾಡಿದ (ಮುಚ್ಚಿದ ಲಕೋಟೆ) ದಾಖಲೆಯನ್ನು ಭಾರತೀಯ ಪುರಾತತ್ವ ಇಲಾಖೆಯು (Archaeological Survey of India) ನ್ಯಾಯಾಲಯಕ್ಕೆ ಸಲ್ಲಿಸಿದೆ. ಭಾರತೀಯ ಪುರಾತತ್ವ ಇಲಾಖೆ (ASI) ತನ್ನ ಸಂಶೋಧನೆಗಳನ್ನು ಸಲ್ಲಿಸಲು ನಿಗದಿಪಡಿಸಿದ ಸಮಯಕ್ಕಿಂತ ಆರು ಅವಧಿ ವಿಸ್ತರಣೆಗಳನ್ನು ತೆಗೆದುಕೊಂಡಿತ್ತು. ಅಧ್ಯಯನ ಮತ್ತು ವಿಶ್ಲೇಷಣೆ ಮಾಡಬೇಕಾದ ಅಪಾರ ಪ್ರಮಾಣದ ಡೇಟಾವನ್ನು ಉಲ್ಲೇಖಿಸಿದೆ. ನವೆಂಬರ್ 2ರಂದು ಸಮೀಕ್ಷೆಯನ್ನು ಮುಗಿಸಿದ್ದೇನೆ ಎಂದು ತಿಳಿಸಿದೆ. ಆದರೆ ಸಮೀಕ್ಷೆಯ ಸಮಯದಲ್ಲಿ ಬಳಸಿದ ಉಪಕರಣಗಳ ವಿವರಗಳನ್ನು ಸಲ್ಲಿಸುವುದು ಸೇರಿದಂತೆ ವರದಿಯನ್ನು ಸಮಗ್ರವಾಗಿ ಮಂಡಿಸಲು ಹೆಚ್ಚಿನ ಸಮಯವನ್ನು ಕೇಳಿದೆ.
ಇದೀಗ ವರದಿ ಸಲ್ಲಿಕೆಯಾಗಿದ್ದು, ಇದನ್ನು ಸಾರ್ವಜನಿಕಗೊಳಿಸಲಾಗುತ್ತದೆಯೇ, ಅಥವಾ ಹಿಂದೂ ಮತ್ತು ಮುಸ್ಲಿಂ ಅರ್ಜಿದಾರರೊಂದಿಗೆ ಹಂಚಿಕೊಳ್ಳಲಾಗುತ್ತದೆಯೋ ಎಂಬುದು ಸ್ಪಷ್ಟವಾಗಿಲ್ಲ. ಈ ಕುರಿತ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.
ಕೆಲವು ಮೊಹರು ಮಾಡಿದ ವಿಭಾಗಗಳನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯು ಆಗಸ್ಟ್‌ನಲ್ಲಿ ಪ್ರಾರಂಭವಾಯಿತು. 17ನೇ ಶತಮಾನದ ಮಸೀದಿಯನ್ನು ಮೊದಲೇ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ಅವಶೇಗಳ ಮೇಲೆ ನಿರ್ಮಿಸಲಾಗಿದೆಯೇ ಎಂದು ಪರಿಶೀಲಿಸಲು ಸಮೀಕ್ಷೆಯನ್ನು ಉದ್ದೇಶಿಸಲಾಗಿತ್ತು. ವಾರಣಾಸಿ ನ್ಯಾಯಾಲಯ ಮಸೀದಿ ಒಳಭಾಗದಲ್ಲಿ ಉತ್ಖನನಕ್ಕೆ ಅವಕಾಶ ನೀಡಿತ್ತು.
ವಾರಣಾಸಿ ನ್ಯಾಯಾಲಯದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿ ಹಿಡಿದ ನಂತರ ಸಮೀಕ್ಷೆ ಆರಂಭವಾಗಿದೆ. ನ್ಯಾಯದ ಹಿತದೃಷ್ಟಿಯಿಂದ ಸಮೀಕ್ಷೆ ಅಗತ್ಯವಾಗಿದೆ ಮತ್ತು ವಿವಾದದಲ್ಲಿ ಎರಡೂ ಕಡೆಯವರಿಗೆ ಲಾಭವಾಗಲಿದೆ ಎಂದು ಹೈಕೋರ್ಟ್ ಹೇಳಿತ್ತು. ಅಂದಹಾಗೆ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಡಿಸೆಂಬರ್ 21 ಕ್ಕೆ ನಿಗದಿಪಡಿಸಿದ್ದು, ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ವಿವಾದದ ಭವಿಷ್ಯವು ನಿರ್ಣಾಯಕ ತಿರುವು ಪಡೆಯುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


