2024ರ ಲೋಕಸಭಾ ಚುನಾವಣೆ: ಮೈತ್ರಿ ಕುರಿತ ಚರ್ಚೆಗೆ ಐವರು ಸದಸ್ಯರ ಸಮಿತಿ ರಚಿಸಿದ ಕಾಂಗ್ರೆಸ್
2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಾದ ಚರ್ಚೆ ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.

ನವದೆಹಲಿ: 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುರಿತಾದ ಚರ್ಚೆ ನಡೆಸಲು ಕಾಂಗ್ರೆಸ್ ಮಂಗಳವಾರ ಐವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದೆ.
ಪಕ್ಷದ ಹಿರಿಯ ನಾಯಕ ಮುಕುಲ್ ವಾಸ್ನಿಕ್ ರಾಷ್ಟ್ರೀಯ ಮೈತ್ರಿ ಸಮಿತಿಯ ಸಂಚಾಲಕರಾಗಿದ್ದು, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸೇರಿದ್ದಾರೆ.
ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಹಿರಿಯ ನಾಯಕ ಮೋಹನ್ ಪ್ರಕಾಶ್ ಕೂಡ ಸಮಿತಿಯ ಸದಸ್ಯರಾಗಿದ್ದಾರೆ.
'2024 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಷ್ಟ್ರೀಯ ಮೈತ್ರಿ ಸಮಿತಿಯನ್ನು ರಚಿಸಿದ್ದಾರೆ' ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.
ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಸಮಿತಿಯು ಎಲ್ಲಾ ಆಯಾಮಗಳಿಂದಲೂ ಪರಿಶೀಲಿಸಲಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


