ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ?: ಸಂಸದ ಡ್ಯಾನಿಶ್ ಅಲಿ
49 ವಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ? ಎಂದು ಕೇಳಿದ್ದಾರೆ.

ನವದೆಹಲಿ: 49 ವಿಪಕ್ಷ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡ್ಯಾನಿಶ್ ಅಲಿ ಪ್ರತಿಕ್ರಿಯೆ ನೀಡಿದ್ದು, ಪ್ರಶ್ನೆ ಕೇಳುವುದು ಹೇಗೆ ಸಂಸತ್ ನ ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ? ಎಂದು ಕೇಳಿದ್ದಾರೆ.
ಸಂಸತ್ ನ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಕ್ಕಾಗಿ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಹೇಳಿರುವುದು ವಿಚಿತ್ರವಾಗಿದೆ ಎಂದು ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ.
ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುವುದು ಸಂಸದೀಯ ಸೌಹಾರ್ದತೆಯ ಉಲ್ಲಂಘನೆಗೆ ಆಪಾದನೆಗೆ ಹೇಗೆ ಅರ್ಹವಾಗುತ್ತದೆ? ಸದನದಲ್ಲಿ ನಿಂದನೆಗಳು ನಡೆದಾಗ ಯಾವುದೇ ರೀತಿಯ ಉಲ್ಲಂಘನೆಯಾಗಿಲ್ಲ, ಸಂಸದರನ್ನು ಅಮಾನತುಗೊಳಿಸಿಲ್ಲ ಅಥವಾ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ದಾಳಿಕೋರರು ಸದನಕ್ಕೆ ಪ್ರವೇಶಿಸಿದಾಗ ಬಿಜೆಪಿ ಸಂಸದರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಧಾನಿ ಮತ್ತು ಗೃಹ ಸಚಿವರು ಯಾವುದೇ ಹೇಳಿಕೆ ನೀಡುವುದಿಲ್ಲ. ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುವುದು ಉಲ್ಲಂಘನೆಯಾಗಿ ಅಮಾನತಿಗೆ ಅರ್ಹತೆ ಯಾವಾಗ ಆಯಿತು ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಡ್ಯಾನಿಶ್ ಅಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


