ಛತ್ತೀಸ್‌ಗಢ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಮಾಜಿ ಸಿಎಂ ರಮಣ್ ಸಿಂಗ್ ಆಯ್ಕೆ
ಬಿಜೆಪಿಯ ಹಿರಿಯ ಶಾಸಕ ಹಾಗೂ ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಮಂಗಳವಾರ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ರಾಯ್‌ಪುರ: ಬಿಜೆಪಿಯ ಹಿರಿಯ ಶಾಸಕ ಹಾಗೂ ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಮಂಗಳವಾರ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹೊಸ ವಿಧಾನಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ಹಂಗಾಮಿ ಸ್ಪೀಕರ್ ರಾಮ್‌ವಿಚಾರ್ ನೇತಮ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಹಾಗೂ ಜಿಜಿಪಿಯ ಒಬ್ಬ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ವಿರೋಧ ಪಕ್ಷದ ನಾಯಕ ಚರಣ್ ದಾಸ್ ಮಹಂತ್, ಉಪಮುಖ್ಯಮಂತ್ರಿಗಳಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ, ಮಾಜಿ ಸಿಎಂಗಳಾದ ರಮಣ್ ಸಿಂಗ್ ಮತ್ತು ಭೂಪೇಶ್ ಬಘೇಲ್ ಅವರು ಹಂಗಾಮಿ ಸ್ಪೀಕರ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು.
ಶಾಸಕರ ಪ್ರಮಾಣ ವಚನ ಸ್ವೀಕಾರದ ನಂತರ, ಸಿಎಂ ಸಾಯಿ ಸಿಂಗ್ ಅವರು, ಸ್ಪೀಕರ್ ಆಗಿ ಆಯ್ಕೆ ಮಾಡುವ ಪ್ರಸ್ತಾವನೆಯನ್ನು ಮಂಡಿಸಿದರು. ಅದನ್ನು ಉಪ ಮುಖ್ಯಮಂತ್ರಿ ಸಾವೊ ಅವರು ಅನುಮೋದಿಸಿದರು.
ನಂತರ 71 ವರ್ಷದ ರಮಣ್ ಸಿಂಗ್ ಅವರನ್ನು ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


