ಜಿಎಸ್ಟಿ ಎರಡನೇ ತಿದ್ದುಪಡಿ ಮಸೂದೆಗೆ ಲೋಕಸಭೆ ಅಂಗೀಕಾರ
ಜಿಎಸ್ಟಿ ಮೇಲ್ಮನವಿ ನ್ಯಾಯಾಧಿಕರಣದ ಅಧ್ಯಕ್ಷರು ಮತ್ತು ಸದಸ್ಯರ ವಯೋಮಿತಿಯನ್ನು ಹೆಚ್ಚಿಸುವ ಜಿಎಸ್ಟಿ ಎರಡನೇ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.

ನವದೆಹಲಿ: ಜಿಎಸ್ಟಿ ಮೇಲ್ಮನವಿ ನ್ಯಾಯಾಧಿಕರಣದ ಅಧ್ಯಕ್ಷರು ಮತ್ತು ಸದಸ್ಯರ ವಯೋಮಿತಿಯನ್ನು ಹೆಚ್ಚಿಸುವ ಜಿಎಸ್ಟಿ ಎರಡನೇ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ವಿವಿಧ ಹೈಕೋರ್ಟ್ಗಳು ಅಥವಾ ಸುಪ್ರೀಂ ಕೋರ್ಟ್ಗಳಲ್ಲಿ ಜಿಎಸ್ಟಿ ಬೇಡಿಕೆಗಳ ವಿರುದ್ಧ ದಾವೆ ಹೂಡುತ್ತಿರುವ ತೆರಿಗೆದಾರರು ತಮ್ಮ ಪ್ರಕರಣಗಳನ್ನು ಹಿಂಪಡೆದು, ಜಿಎಸ್ಟಿ ಮೇಲ್ಮನವಿ ನ್ಯಾಯಾಧಿಕರಣ ಸಂಪರ್ಕಿಸಲು ಸ್ವತಂತ್ರ್ಯರಾಗಿರುತ್ತಾರೆ ಎಂದು ಹೇಳಿದರು.
ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ 2023 ಅನ್ನು ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಮಸೂದೆಯು ಜಿಎಸ್ಟಿ ಮೇಲ್ಮನವಿ ನ್ಯಾಯಾಧಿಕರಣ(ಜಿಎಸ್ಟಿಎಟಿ)ದ ಅಧ್ಯಕ್ಷರು ಮತ್ತು ಸದಸ್ಯರ ವಯಸ್ಸಿನ ಮಿತಿಯನ್ನು ಕ್ರಮವಾಗಿ 70 ವರ್ಷ ಮತ್ತು 67 ವರ್ಷಗಳಿಗೆ ಹೆಚ್ಚಿಸಲು ಅವಕಾಶ ನೀಡುತ್ತದೆ. ಈ ಹಿಂದೆ ಅಧ್ಯಕ್ಷರಿಗೆ 67 ವರ್ಷ ಮತ್ತು ಸದಸ್ಯರಿಗೆ 65 ವರ್ಷ ನಿಗದಿಪಡಿಸಲಾಗಿತ್ತು.
ಪರೋಕ್ಷ ತೆರಿಗೆಗಳಿಗೆ ಸಂಬಂಧಿಸಿದ ವಿಷಯಗಳ ದಾವೆಯಲ್ಲಿ 10 ವರ್ಷಗಳ 'ಗಣನೀಯ ಅನುಭವ' ಹೊಂದಿರುವ ವಕೀಲರು ಜಿಎಸ್ ಟಿ ಮೇಲ್ಮನವಿ ನ್ಯಾಯಾಧಿಕರಣದ ಸದಸ್ಯರಾಗಿ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.
ಈ ತಿದ್ದುಪಡಿಯ ಪ್ರಕಾರ, ಜಿಎಸ್ಟಿಎಟಿಯ ಅಧ್ಯಕ್ಷರು ಮತ್ತು ಸದಸ್ಯರು ನಾಲ್ಕು ವರ್ಷ ಅಥವಾ ಕ್ರಮವಾಗಿ 70 ವರ್ಷ ಮತ್ತು 67 ವರ್ಷ ವಯಸ್ಸಿನವರೆಗೆ ಅಧಿಕಾರವನ್ನು ಹೊಂದಿರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


