ಕಲಾಪಕ್ಕೆ ಅಡ್ಡಿ: ಮತ್ತೆ ಇಬ್ಬರು ಸಂಸದರ ಅಮಾನತು, ಒಟ್ಟು ಸಂಖ್ಯೆ 143ಕ್ಕೆ ಏರಿಕೆ
ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಮತ್ತೆ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದ್ದು, ಆ ಮೂಲಕ ಅಮಾನತಗೊಂಡ ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಮತ್ತೆ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದ್ದು, ಆ ಮೂಲಕ ಅಮಾನತಗೊಂಡ ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ.
ಇಂದು ಕಲಾಪಕ್ಕೆ ಅಡ್ಡಿ ಪಡಿಸಿ, ಸದನದಲ್ಲಿ ದುರ್ನಡತೆ ತೋರಿದ ಆರೋಪದ ಮೇರೆಗೆ ಕೇರಳ ಕಾಂಗ್ರೆಸ್ ಸಂಸದ ಥಾಮಸ್ ಚಾಜಿಕಡನ್ (ಮಣಿ) ಮತ್ತು ಸಿಪಿಐಎಂ ಸಂಸದ ಎ ಎಂ ಆರಿಫ್ ಅವರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆ ಅಮಾನತು ಮಾಡಿದೆ. ಈ ಮೂಲಕ ಅಮಾನತುಗೊಂಡ ಸಂಸದರ ಸಂಖ್ಯೆ 143ಕ್ಕೆ ಏರಿಕೆಯಾಗಿದೆ. ಇದು ಸಂಸತ್ ಕಲಾಪದ ಇತಿಹಾಸದಲ್ಲೇ ಅತ್ಯಧಿಕ ಎಂದು ಹೇಳಲಾಗಿದೆ.
ಕಳೆದ ವಾರದಿಂದ ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಸತ್ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಭಾಷಣ ಮಾಡಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


