ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್ ಗೆ ಖರ್ಗೆ ಪ್ರಶ್ನೆ
ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನವದೆಹಲಿ: ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯಸಭಾ ಅಧ್ಯಕ್ಷರೂ ಆಗಿರುವ ಧನಕರ್ ಅವರು, ತಾನು ರೈತ ಮತ್ತು 'ಜಾಟ್' (ಅವರ ಜಾತಿ) ಎಂಬ ಕಾರಣಕ್ಕೆ ತಮ್ಮ ಬಗ್ಗೆ ಮಿಮಿಕ್ರಿ ಮಾಡಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದರು. ಆಡಳಿತಾರೂಢ ಬಿಜೆಪಿ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಇತರ ಸದಸ್ಯರಿಗೆ ರಕ್ಷಣೆ ನೀಡುವುದು ಸಭಾಪತಿಯವರ ಕೆಲಸ. ಆದರೆ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ.
"ರಾಜ್ಯಸಭೆಯಲ್ಲಿ ಆಗಾಗ ಮಾತನಾಡಲು ನನಗೆ ಅವಕಾಶ ನೀಡುವುದಿಲ್ಲ. ಆದರೆ ನಾನು ದಲಿತ ಎಂಬ ಕಾರಣಕ್ಕೆ ಹೀಗೆ ಮಾಡುತ್ತಾರೆ ಎಂದು ಹೇಳಬೇಕೇ?" ಎಂದು ಪ್ರಶ್ನಿಸಿದರು. ಸದನದ ಒಳಗೆ ಜಾತಿಯ ಬಗ್ಗೆ ಮಾತನಾಡುವ ಮೂಲಕ ಹೊರಗಿನವರನ್ನು ಪ್ರಚೋದಿಸಬಾರದು ಎಂದಿದ್ದಾರೆ.
ಸಾಂವಿಧಾನಿಕ ಉನ್ನತ ಸ್ಥಾನದಲ್ಲಿರುವವರು ತಮ್ಮ ಜಾತಿಯ ಬಗ್ಗೆ ಮಾತನಾಡುತ್ತಿರುವುದು ಅತ್ಯಂತ ದುಃಖಕರ ವಿಚಾರ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


