ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ; ಶೇ.74 ರಷ್ಟು ಫಲಪ್ರದ ಎಂದ ಸ್ಪೀಕರ್ ಓಂ ಬಿರ್ಲಾ
ನಿಗದಿಗಿಂತ ಒಂದು ದಿನ ಮುಂಚಿತವಾಗಿಯೇ ಸಂಸತ್ ಚಳಿಗಾಲದ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಚಳಿಗಾಲದ ಅಧಿವೇಶನ ಶೇಕಡಾ 74 ರಷ್ಟು ಫಲಪ್ರದವಾಗಿದೆ...

ನವದೆಹಲಿ: ನಿಗದಿಗಿಂತ ಒಂದು ದಿನ ಮುಂಚಿತವಾಗಿಯೇ ಸಂಸತ್ ಚಳಿಗಾಲದ ಅಧಿವೇಶನಕ್ಕೆ ಗುರುವಾರ ತೆರೆ ಬಿದ್ದಿದೆ. ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಚಳಿಗಾಲದ ಅಧಿವೇಶನ ಶೇಕಡಾ 74 ರಷ್ಟು ಫಲಪ್ರದವಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಹೇಳಿದ್ದಾರೆ.
ಸದನವು 14 ಸಭೆಗಳನ್ನು ನಡೆಸಿದೆ ಮತ್ತು 61 ಗಂಟೆ 50 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದು ಬಿರ್ಲಾ ತಮ್ಮ ಸಮಾರೋಪ ಭಾಷಣದಲ್ಲಿ ತಿಳಿಸಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ(ದ್ವಿತೀಯ) ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ(ದ್ವಿತೀಯ) ಸಂಹಿತೆ ಸೇರಿದಂತೆ ಒಟ್ಟು 18 ಮಸೂದೆಗಳನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಸ್ಪೀಕರ್ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆಯಲ್ಲೂ ಟೆಲಿಕಾಂ ಮಸೂದೆ ಅಂಗೀಕಾರ
ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಮಸೂದೆಗಳಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ(ಎರಡನೇ ತಿದ್ದುಪಡಿ) ಮಸೂದೆ, 2023 ಮತ್ತು ದೂರಸಂಪರ್ಕ ಮಸೂದೆ, 2023 ಕೂಡ ಸೇರಿವೆ.
ಅಧಿವೇಶನದಲ್ಲಿ 55 ಸ್ಟಾರ್ ಪ್ರಶ್ನೆಗಳಿಗೆ ಮೌಖಿಕವಾಗಿ ಉತ್ತರಿಸಲಾಗಿದೆ ಎಂದು ಬಿರ್ಲಾ ತಿಳಿಸಿದ್ದಾರೆ.
"ನಿಯಮ 377 ರ ಅಡಿಯಲ್ಲಿ ಒಟ್ಟು 265 ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


