ದೇಶ

ಕಾಶ್ಮೀರ: ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ, ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ಉಗ್ರರಿಂದ ಗುಂಡಿನ ದಾಳಿ, ಮೂವರು ಯೋಧರು ಹುತಾತ್ಮ
ಭಾರತೀಯ ಸೇನೆ
Published On :

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ ಪ್ರದೇಶದಲ್ಲಿ ಹೊಂಚು ಹಾಕಿ ಕುಳಿತಿದ್ದ ಉಗ್ರರು, ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬುಫ್ಲಿಯಾಜ್‌ ನಲ್ಲಿ ಬುಧವಾರದಿಂದ ಭಯೋತ್ಪಾದಕರ ವಿರುದ್ಧ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆ ನಡೆಯುತ್ತಿದ್ದು, ಅಲ್ಲಿಗೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನ ಮೇಲೆ ಇಂದು ಉಗ್ರರು ದಾಳಿ ನಡೆಸಿದ್ದಾರೆ.

ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡು ಹಾರಿಸಿದ್ದು, ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿ ನಡೆಸಿದ ಉಗ್ರರನ್ನು ಪತ್ತೆಹಚ್ಚಲಾಗಿದ್ದು, ಆ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಮತ್ತು ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಎನ್‌ಕೌಂಟರ್‌ನಲ್ಲಿ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು ಮತ್ತು ಇಬ್ಬರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.