ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ
ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ನವದೆಹಲಿ: ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ಡಿ ಕೆ ಸುರೇಶ್, ದೀಪಕ್ ಬೈಜ್ ಮತ್ತು ನಕುಲ್ ನಾಥ್ ಅವರನ್ನು ಅಮಾನತುಗೊಳಿಸುವ ಪ್ರಸ್ತಾಪ ಮಂಡಿಸಿದರು.
ದೀಪಕ್ ಬೈಜ್, ಡಿ ಕೆ ಸುರೇಶ್, ನಕುಲ್ ನಾಥ್ ಅವರು ಸದನದ ಬಾವಿಗೆ ಇಳಿದು ಸದನದಲ್ಲಿ ಫಲಕಗಳನ್ನು ಪ್ರದರ್ಶಿಸುವ ಮೂಲಕ ಅಶಿಸ್ತಿನಿಂದ ವರ್ತಿಸಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಈ ಸದನ ಅವರನ್ನು ಸದನದಿಂದ ಅಮಾನತುಗೊಳಿಸಬಹುದು ಎಂದು ಜೋಶಿ ಹೇಳಿದರು.
ಇದಕ್ಕೂ ಮುನ್ನ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು, ಸದನದಲ್ಲಿ ಪ್ರತಿಭಟನೆ ನಡೆಸದಂತೆ ಈ ಮೂವರು ಸಂಸದರಿಗೆ ಎಚ್ಚರಿಕೆ ನೀಡಿದ್ದರು.
ಇಂದು ಬೆಳಗ್ಗೆ ಸದನ ಆರಂಭವಾಗುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯ ಸಂಸದರನ್ನು ಅಮಾನತುಗೊಳಿಸಿದ್ದನ್ನು ವಿರೋಧಿಸಿ ಪ್ರತಿಪಕ್ಷ ಸಂಸದರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು ಮತ್ತು ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಇದುವರೆಗೆ ಲೋಕಸಭೆಯಿಂದ 100 ಸಂಸದರನ್ನು ಹಾಗೂ ರಾಜ್ಯಸಭೆಯಿಂದ 46 ಸಂಸದರನ್ನು ಅಮಾನತುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


