ಕ್ರಿಸ್ ಮಸ್ ಗೆ ಕೇಂದ್ರ ಸರ್ಕಾರದ ಗಿಫ್ಟ್: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ
ಕ್ರಿಸ್ ಮಸ್ ಹೊಸ ವರ್ಷದ ಮುನ್ನವೇ ಭಾರತೀಯರಿಗೆ ಉಡುಗೊರೆ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ ಮಾಡಲಾಗಿದೆ. ಇದೇ ವೇಳೆ, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆ ಆಗಿಲ್ಲ.

ನವದೆಹಲಿ: ಕ್ರಿಸ್ ಮಸ್ ಹೊಸ ವರ್ಷದ ಮುನ್ನವೇ ಭಾರತೀಯರಿಗೆ ಉಡುಗೊರೆ ಸಿಕ್ಕಿದೆ. ವಾಣಿಜ್ಯ ಬಳಕೆಯ 19 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 39.50 ರು. ಇಳಿಕೆ ಮಾಡಲಾಗಿದೆ. ಇದೇ ವೇಳೆ, ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆ ಆಗಿಲ್ಲ.
ಆಯಿಲ್ ಮಾರ್ಕೆಟಿಂಗ್ ಕಂಪನಿಯು ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಕಡಿಮೆ ಮಾಡಿದೆ. ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 39 ರೂಪಾಯಿ ಇಳಿಕೆಯಾಗಿದೆ. ಕ್ರಿಸ್‌ಮಸ್ ಹಬ್ಬ ಮತ್ತು ಹೊಸ ವರ್ಷಾಚರಣೆಗೂ ಮುನ್ನವೇ ತೈಲ ಮಾರಾಟ ಸಂಸ್ಥೆ ದರ ಇಳಿಕೆಯ ಘೋಷಣೆ ಮಾಡಿದೆ.
ಇದನ್ನೂ ಓದಿ: ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳ: ನೂತನ ದರ ಹೀಗಿದೆ
ಈ ಹಿಂದೆ ಡಿಸೆಂಬರ್ 1 ರಂದು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಬದಲಾಯಿಸಲಾಗಿತ್ತು. ಆಗ ಸಿಲಿಂಡರ್ ಬೆಲೆಯನ್ನು 21 ರೂ. ಹೆಚ್ಚಿಸಲಾಗಿತ್ತು. ಆದರೆ, ಅದಕ್ಕೂ ಮುನ್ನ ನವೆಂಬರ್ 16 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 57 ರೂಪಾಯಿ ಕಡಿತಗೊಳಿಸಲಾಗಿತ್ತು. ಕೆಲವು ಸಮಯದಿಂದ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಬಹುತೇಕ ಪ್ರತಿ ತಿಂಗಳು ಬದಲಾವಣೆ ಕಂಡುಬರುತ್ತಿದೆ. ಸಿಲಿಂಡರ್ ದರವನ್ನು ಪದೇ ಪದೇ ಪರಿಷ್ಕರಿಸಲಾಗುತ್ತಿದೆ.
ವಿವಿಧ ನಗರಗಳಲ್ಲಿ 19 ಕೆ.ಜಿ ಎಲ್.ಪಿ.ಜಿ ಸಿಲಿಂಡರ್ ಬೆಲೆ :
ದೆಹಲಿ - 1757.50 ರೂ.
ಕೋಲ್ಕತ್ತಾ - 1869 ರೂ.
ಮುಂಬೈ - 1710 ರೂ.
ಚೆನ್ನೈ - 1929.50 ರೂ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


