ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ಎಲ್ಲಿ ಕೊನೆಗೊಂಡಿದೆ: ಪ್ರತಿಪಕ್ಷಗಳ ಟೀಕೆ
ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್‌ನ ಥಾನಮಂಡಿ ಪ್ರದೇಶದಲ್ಲಿ ಗುರುವಾರ ಎರಡು ಸೇನಾ ವಾಹನಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್‌ನ ಥಾನಮಂಡಿ ಪ್ರದೇಶದಲ್ಲಿ ಗುರುವಾರ ಎರಡು ಸೇನಾ ವಾಹನಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆ ಕೊನೆಗೊಂಡಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಭಯೋತ್ಪಾದನಾ ದಾಳಿಯ ಕುರಿತು ಗುರುವಾರ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಇಂದು ಕೂಡ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಇದೆ, ಕೇವಲ ಒಂದು ಘಟನೆ ನಡೆದಿದೆ. ಭಯೋತ್ಪಾದನೆ ಕೊನೆಗೊಂಡಿಲ್ಲ. ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ಪ್ರವಾಸೋದ್ಯಮ ವೃದ್ಧಿ ಬಗ್ಗೆ ಮಾತನಾಡುತ್ತಿದ್ದಾರೆ. ಒಬ್ಬ ಪ್ರವಾಸಿಗರ ಮೇಲೆ ಗುಂಡು ಹಾರಿಸಿದರೆ ಯಾರೂ ಕೂಡಾ ಇಲ್ಲಿಗೆ ಬರುವುದಿಲ್ಲ ಎಂದರು.
ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವತ್ ಮಾತನಾಡಿ, ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಪುಲ್ವಾಮಾ ದಾಳಿಯ ಪುನರಾವರ್ತನೆಯಾಗಿದೆ. ಸರ್ಕಾರವು ನಿದ್ರಿಸುತ್ತಿದೆ. ಮತ್ತೆ ನಮ್ಮ ಯೋಧರ ತ್ಯಾಗದ ಮೇಲೆ ರಾಜಕೀಯ ಮಾಡಲು ಬಿಜೆಪಿಯವರು ಬಯಸುತ್ತೀರಾ? 2024 ರಲ್ಲಿ ಪುಲ್ವಾಮಾ ವಿಷಯದ ಬಗ್ಗೆ ಮತ್ತೊಮ್ಮೆ ಮತ ಕೇಳುತ್ತೀರಾ? ಪೂಂಚ್ ಘಟನೆಯ ಬಗ್ಗೆ ನಾವು ಪ್ರಶ್ನೆಗಳನ್ನು ಕೇಳಿದರೆ, ಅವರು ನಮ್ಮನ್ನು ದೆಹಲಿ ಅಥವಾ ದೇಶದಿಂದ ಹೊರಹಾಕುತ್ತಾರೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


