ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಓರ್ವ ಉಗ್ರನ ಹತ್ಯೆ ಮಾಡಿದ ಭದ್ರತಾ ಪಡೆ
ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು: ಶನಿವಾರ ಮುಂಜಾನೆ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದು, ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಖ್ನೂರ್‌ನ ಖೌರ್ ಸೆಕ್ಟರ್‌ನಲ್ಲಿರುವ ಐಬಿಯಿಂದ ನಾಲ್ವರು ಭಯೋತ್ಪಾದಕರ ಗುಂಪು ಗಡಿಯಲ್ಲಿ ನುಸುಳುವಿಕೆಗೆ ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಭದ್ರತಾ ಪಡೆ ಕಾರ್ಯಾಚರಣೆಯನ್ನು ಆರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಳನುಸುಳುತ್ತಿದ್ದ ಭಯೋತ್ಪಾದಕರ ಮೇಲೆ ಭದ್ರತಾ ಪಡೆಗಳು ಪರಿಣಾಮಕಾರಿ ಗುಂಡಿನ ದಾಳಿ ನಡೆಸಿತು. ಈ ವೇಳೆ ಉಗ್ರರಲ್ಲಿ ಒಬ್ಬಾತ ಹತನಾಗಿದ್ದಾನೆ ಎಂದು ಅವರು ಹೇಳಿದರು.
ಆದರೆ, ಮೃತನ ಶವವನ್ನು ಆತನ ಸಹಚರರು ಐಬಿಯಾದ್ಯಂತ ಎಳೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


