ದೇಶ

ಲೋಕಸಭಾ ಚುನಾವಣೆ 2024: ಮಹಾರಾಷ್ಟ್ರ ಸೀಟು ಹಂಚಿಕೆ ಕುರಿತು ರಾಹುಲ್, ಪವಾರ್ ಮಾತುಕತೆ

2024ರ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಚಿಸಲು 16 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಪಕ್ಷದ ಸದಸ್ಯ ಪಿ ಚಿದಂಬರಂ ನೇತೃತ್ವದಲ್ಲಿದೆ

ಲೋಕಸಭಾ ಚುನಾವಣೆ 2024: ಮಹಾರಾಷ್ಟ್ರ ಸೀಟು ಹಂಚಿಕೆ ಕುರಿತು ರಾಹುಲ್, ಪವಾರ್ ಮಾತುಕತೆ
ರಾಹುಲ್ ಗಾಂಧಿ, ಶರದ್ ಪವಾರ್
Published On :

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಚಿಸಲು 16 ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಪಕ್ಷದ ಸದಸ್ಯ ಪಿ ಚಿದಂಬರಂ ನೇತೃತ್ವದಲ್ಲಿದೆ. ನಿನ್ನೆ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶರದ್ ಪವಾರ್ ಅವರೊಂದಿಗೆ ಕಾರ್ಯತಂತ್ರದ ಸಭೆ ನಡೆಸಿದ್ದು, ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. 

ಜಂತರ್ ಮಂತರ್ ನಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ನಂತರ ರಾಹುಲ್ ಗಾಂಧಿ ಜನಪಥ್‌ನಲ್ಲಿರುವ ಪವಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.  ಶಿವಸೇನೆ (ಉಧವ್ ಬಾಳಾಸಾಹೇಬ್ ಠಾಕ್ರೆ), ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಸೇರಿದಂತೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಪಾಲುದಾರರ ನಡುವಿನ ಸೀಟು ಹಂಚಿಕೆಯ ಸುತ್ತ ಮಾತುಕತೆ ನಡೆದಿದೆ ಎಂದು ತಿಳಿದುಬಂದಿದೆ. 

ಅನುಭವಿ ಎನ್‌ಸಿಪಿ ನಾಯಕ ಶರದ್ ಪವಾರ್, ಮಹಾರಾಷ್ಟ್ರದಲ್ಲಿ ಸ್ಥಳೀಯ ಪ್ರಭಾವದಿಂದಾಗಿ ಎಡಪಕ್ಷಗಳು, ರೈತರು ಮತ್ತು ಕಾರ್ಮಿಕರ ಪಕ್ಷ ಮತ್ತು  ಬಹುಜನ ಅಘಾಡಿಯಂತಹ ಸಣ್ಣ ಪಕ್ಷಗಳನ್ನು ವಿಪಕ್ಷಗಳ ಒಕ್ಕೂಟದಲ್ಲಿ ಸೇರಿಸಿಕೊಳ್ಳಲು ಆಸಕ್ತಿ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಜಂಟಿ ರ್ಯಾಲಿಗಳನ್ನು ಸುಲಭಗೊಳಿಸುವ ಗುರಿ ಹೊಂದಿರುವ ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಶೀಘ್ರವಾಗಿ ಅಂತಿಮಗೊಳಿಸುವ ಮಹತ್ವವನ್ನು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.