ದೇಶ

2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಸಜ್ಜು, ಪ್ರಿಯಾಂಕಾ ವಾದ್ರಾ ಸಾಥ್?

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ 2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದು, ಈ ಬಾರಿ ರಾಹುಲ್ ಜೊತೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಹೆಜ್ಜೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಸಜ್ಜು, ಪ್ರಿಯಾಂಕಾ ವಾದ್ರಾ ಸಾಥ್?
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ
Published On :

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ 2ನೇ ಹಂತದ ಭಾರತ್ ಜೋಡೋ ಯಾತ್ರೆಗೆ ಸಜ್ಜಾಗಿದ್ದು, ಈ ಬಾರಿ ರಾಹುಲ್ ಜೊತೆ ಅವರ ಸಹೋದರಿ ಪ್ರಿಯಾಂಕಾ ವಾದ್ರಾ ಕೂಡ ಹೆಜ್ಜೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.

ಕನ್ಯಾಕುಮಾರಿಯಿಂದ ಶ್ರೀನಗರದ ತನಕ 150 ದಿನಗಳ ಕಾಲ ಭಾರತ್ ಜೋಡೋ ಯಾತ್ರೆ ನಡೆಸಿ ಅಭೂತಪೂರ್ವ ಯಶಸ್ಸು ಕಂಡ ಬೆನ್ನಲ್ಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಜನವರಿಯಿಂದ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಆರಂಭಿಸಲು ಸಜ್ಜಾಗಿದ್ದಾರೆ. ಲೋಕಸಭಾ ಚುನಾವಣೆ ಸಮೀಸುತ್ತಿರುವ ಬೆನ್ನಲ್ಲೇ ರಾಹುಲ್ ಅವರು ಎರಡನೇ ಹಂತದ ಭಾರತ ಜೋಡೋ ಯಾತ್ರೆಗೆ ಕೈಗೊಳ್ಳಲು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನ ಈ ಬಾರಿ ಭಾರತ್ ಜೋಡೋ ಯಾತ್ರೆಯ ಎರಡನೇ ಹಂತದಲ್ಲಿ ಪೂರ್ವ ಭಾಗದಿಂದ ಪಶ್ಚಿಮ ಭಾಗದವರೆಗೆ ಪಾದಯಾತ್ರೆ ನಡೆಸಲಿದ್ದಾರೆ. ಈ ಬಾರಿ ಸಹೋದರಿ ಪ್ರಿಯಾಂಕಾ ಗಾಂಧಿ ಯಾತ್ರೆ ಯುದ್ದಕ್ಕೂ ರಾಹುಲ್ ಗಾಂಧಿ ಜೊತೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತ್ ಜೋಡೋ ಯಾತ್ರೆ ಎಲ್ಲಿಂದ ಎಲ್ಲಿಗೆ ನಡೆಸಬೇಕು ಎನ್ನುವುದೂ ಸೇರಿದಂತೆ ಪಾದಯಾತ್ರೆಯ ಮಾರ್ಗ ಸೇರಿದಂತೆ ವಿವಿಧ ರೂಪರೇಷೆ ಸಿದ್ದಪಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ.

2022ರ ಸೆಪ್ಟೆಂಬರ್ ರಿಂದ 2023 ರ ಜನವರಿ ವರೆಗೆ ಸುಮಾರು 150 ದಿನಗಳಲ್ಲಿ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಶ್ರೀನಗರದ ಕಾಲ್ನಡಿಗೆ ನಡೆಸಿದ್ದರು. ಈ ವೇಳೆ ವಿರೋಧ ಪಕ್ಷಗಳ ಹಲವು ನಾಯಕರು ಆಯಾ ರಾಜ್ಯಗಳಲ್ಲಿ ರಾಹುಲ್ ಗಾಂಧಿ ಜೊತೆಯಾಗಿ ಬೆಂಬಲ ಸೂಚಿಸಿದ್ದರು, ಜೊತೆಗೆ ರಾಜ್ಯಗಳಲ್ಲಿ ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಈ ಯಾತ್ರೆಯ 2ನೇ ಹಂತ ಆರಂಭವಾಗುತ್ತಿದ್ದು, ಭಾರತ್ ಜೋಡೋ ಯಾತ್ರೆ ಪೂರ್ವದಿಂದ ಪಶ್ವಿಮ ಭಾಗದವರೆಗೆ ನಡೆಯಲಿದ್ದು ಯಾತ್ರೆಯ ಸ್ಥಳ, ದಿನಾಂಕ, ಮಾರ್ಗ ಸೇರಿದಂತೆ ಮತ್ತಿತರ ವಿಷಯಗಳನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಹಿರಿಯ ನಾಯಕರೊಬ್ಬರು ಮಾಹಿತಿ ನೀಡಿದ್ದಾರೆ.

ಈ ಬಾರಿ ಪಾದಯಾತ್ರೆಯಲ್ಲಿ ಪ್ರಿಯಾಂಕಾ ಭಾಗಿಯಾಗಲಿದ್ದು ಮಹಿಳೆಯರು, ಯುವಜನರು ಮತ್ತು ಗ್ರಾಮೀಣ ಜನತೆಯನ್ನು ಒಳಗೊಳ್ಳುವಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಈ ವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡೆಯಲಿದ್ದು ಭಾರತ್ ಜೋಡೋ ಯಾತ್ರೆಯ ರೂಪುರೇಷೆ ಸಿದ್ಧಪಡಿಸುವ ಸಾಧ್ಯತೆಗಳಿವೆ. ಪಾದಯಾತ್ರೆ ವೇಳೆ ನಗರಗಳು ಮತ್ತು ಪಟ್ಟಣಗಳಲ್ಲಿನ ಪ್ರಮುಖ ಗುರಿ ತಾಣಗಳಲ್ಲಿ ಮತ್ತು ಸುತ್ತಮುತ್ತಲಿನ ನಡಿಗೆಯಲ್ಲಿ ಸಮಾವೇಶ, ಜನರೊಂದಿಗೆ ಸಂವಾದ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.