ದೇಶ

ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ: 3 ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ: 3 ಕ್ರಿಮಿನಲ್ ಕಾನೂನು ತಿದ್ದುಪಡಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ
ಸಂಗ್ರಹ ಚಿತ್ರ
Published On :

ನವದೆಹಲಿ: ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ.

ಈ ಬೆಳವಣಿಗೆಯನ್ನು ರಾಷ್ಟ್ರಪತಿ ಭವನದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದ್ದು, ಭಾರತದ ಗೆಜೆಟ್‌ನಲ್ಲಿ ಇದು ಇನ್ನಷ್ಟೇ ಪ್ರಕಟವಾಗಬೇಕಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳಿಗೆ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಬದಲಾಯಿಸಲಿವೆ.

ಮೊದಲು ಆಗಸ್ಟ್ 11ರಂದು ಲೋಕಸಭೆಯಲ್ಲಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷರತಾ ಮಸೂದೆಗಳನ್ನು ಮಂಡಿಸಲಾಗಿತ್ತು. ಇವುಗಳನ್ನು ಡಿಸೆಂಬರ್ 20ರಂದು ಲೋಕಸಭೆ ಅಂಗೀಕರಿಸಿತ್ತು ಮತ್ತು ಡಿಸೆಂಬರ್ 21ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.