ದೇಶ

ಕ್ರಿಸ್'ಮಸ್ ಆಚರಣೆ: ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ

ದೇಶದಾದ್ಯಂತ ಕ್ರಿಸ್'ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಕ್ರಿಸ್'ಮಸ್ ಆಚರಣೆ: ಜನತೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಶುಭಾಶಯ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಾದ್ಯಂತ ಕ್ರಿಸ್'ಮಸ್ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ ಮೇರಿ ಕ್ರಿಸ್ಮಸ್ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸಂತೋಷ, ಶಾಂತಿ ಹಾಗೂ ಸಮೃದ್ಧಿಯನ್ನು ತರಲಿ. ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಈ ಹಬ್ಬ ಸಂಕೇತಿಸುತ್ತದೆ. ಉತ್ತಮ ಸಮಾಜ ನಿರ್ಮಿಸಲು ಹಾಗೂ ಅಭಿವೃದ್ಧಿ ಕಡೆಗೆ ಕೆಲಸ ಮಾಡೋಣ. ಯೇಸು ಕ್ರಿಸ್ತನ ಬೋಧನೆಗಳನ್ನು ಸದಾ ನೆನಪಿಸಿಕೊಳ್ಳೋಣ ಎಂದು ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್ ಮಾಡಿ, ಎಲ್ಲರಿಗೂ ಕ್ರಿಸ್ಮಸ್ ಶುಭಾಶಯಗಳು. ಈ ಸಂತೋಷದ ಹಬ್ಬವು ಸಾಮರಸ್ಯ, ಪ್ರೀತಿ ಮತ್ತು ಸಹಾನುಭೂತಿಯ ಸಂದೇಶವನ್ನು ಹರಡುತ್ತದೆ. ನಾವು ಯೇಸುಕ್ರಿಸ್ತನ ಬೋಧನೆಗಳನ್ನು ನೆನಪಿಸಿಕೊಳ್ಳೋಣ ಮತ್ತು ಎಲ್ಲರ ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಲು ಸಂಕಲ್ಪ ಮಾಡೋಣ ಎಂದು ತಿಳಿಸಿದ್ದಾರೆ.

ವಿಶ್ವದಾದ್ಯಂತ ಕ್ರಿಸ್'ಮಸ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ರಾತ್ರಿಯಿಂದಲೇ ಚರ್ಚ್'ಗಳಿಗೆ ತೆರಳಿ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಕ್ರಿಸ್'ಮಸ್ ಅಂಗವಾಗಿ ಚರ್ಚ್'ಗಳಿಗೆ ದೀಪಾಲಂಕಾಗಳನ್ನು ಮಾಡಲಾಗಿದ್ದು, ರಾತ್ರಿಯಿಂದಲೇ ಚರ್ಚ್'ಗಳಲ್ಲಿ ವಿಶೇಷ ಪ್ರವಚನ ನಡೆಸಲಾಗುತ್ತಿದೆ. ಯೇಸು ಪ್ರಭುವಿಗೆ ನಮನಗಳನ್ನು ಸಲ್ಲಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.