ದೇಶ

ಉತ್ತರ ಪ್ರದೇಶ: ಮಸೀದಿ ಗೋಡೆ ಮೇಲೆ 'ಜೈ ಶ್ರೀರಾಮ್‌ʼ ಬರಹ', ಕ್ರಮಕ್ಕೆ ಆಗ್ರಹ

ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ ಶ್ರೀರಾಮ್‌ʼ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶ: ಮಸೀದಿ ಗೋಡೆ ಮೇಲೆ 'ಜೈ ಶ್ರೀರಾಮ್‌ʼ ಬರಹ', ಕ್ರಮಕ್ಕೆ ಆಗ್ರಹ
ಮಸೀದಿ ಗೋಡೆ ಮೇಲೆ ಕಂಡು ಬಂದ ಜೈ ಶ್ರೀರಾಮ್ ಬರಹ.
Published On :

ಅಲಿಗಢ: ಉತ್ತರ ಪ್ರದೇಶದ ಅಲಿಗಢದಲ್ಲಿರುವ ಮಸೀದಿಯೊಂದರ ಗೋಡೆಗಳ ಮೇಲೆ ʼಜೈ ಶ್ರೀರಾಮ್‌ʼ ಎಂಬ ಘೋಷಣೆಗಳನ್ನು ಬರೆಯಲಾಗಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಅಲಿಗಢ್‌ನ ದೆಹಲಿ ಗೇಟ್ ಮಸೀದಿಯೊಂದರ ʼಜೈ ಶ್ರೀರಾಮ್ʼ ಎನ್ನುವ ಬರಹವನ್ನು ಬರೆಯಲಾಗಿದೆ. ಆ ಬಳಿಕ ಗೋಡೆಯನ್ನು ಧ್ವಂಸ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ನಂತರ ಸಮಾಜವಾದಿ ಪಕ್ಷದ (ಎಸ್‌ಪಿ) ನಿಯೋಗವು ಪೊಲೀಸರನ್ನು ಭೇಟಿ ಮಾಡಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಔಪಚಾರಿಕ ದೂರು ದಾಖಲಿಸಲಾಗಿದೆ. ಶೀಘ್ರದಲ್ಲಿ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ‌ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದ್ದಾರೆ.

ನಿಯೋಗದಲ್ಲಿದ್ದ ಸಮಾಜವಾದಿ ಪಕ್ಷದ ಮುಖಂಡ ಮನೋಜ್ ಯಾದವ್ ಅವರು ಮಾತನಾಡಿ, ಕೆಲವು ಸಮಾಜ ವಿರೋಧಿಗಳು ಇಂತಹ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ನಗರದ ವಾತಾವರಣವನ್ನು ಹಾಳು ಮಾಡಿದ್ದಾರೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.