ಆಂಧ್ರ ಪ್ರದೇಶದಲ್ಲಿ ಕೋವಿಡ್ ಗೆ ಮೊದಲ ಬಲಿ
ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸಬ್-ವೇರಿಯಂಟ್ ಜೆಎನ್.1 ರ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ವಿಶಾಖಪಟ್ಟಣಂನಲ್ಲಿ 51 ವರ್ಷದ ಮಹಿಳೆ ಮಂಗಳವಾರ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ವಿಜಯವಾಡ: ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸಬ್-ವೇರಿಯಂಟ್ ಜೆಎನ್.1 ರ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ವಿಶಾಖಪಟ್ಟಣಂನಲ್ಲಿ 51 ವರ್ಷದ ಮಹಿಳೆ ಮಂಗಳವಾರ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಡಿಸೆಂಬರ್ 24 ರಂದು ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. RT-PCR ಪರೀಕ್ಷೆಯಲ್ಲಿ ಆಕೆಗೆ COVID-19 ಗೆ ಪಾಸಿಟಿವ್ ಬಂದಿತ್ತು. ಹೀಗಾಗಿ ವೈದ್ಯರು ಮಹಿಳೆಗೆ ವಿಶೇಷ ಚಿಕಿತ್ಸೆ ನೀಡಿದ್ದರು.
ನಂತರ ಜೆಎನ್.1 ರೂಪಾಂತರವನ್ನು ಪರೀಕ್ಷಿಸಲು ಮಹಿಳೆ ಮಾದರಿಯನ್ನು ವಿಜಯವಾಡದ ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ದುರದೃಷ್ಟವಶಾತ್, ಫಲಿತಾಂಶ ಬರುವ ಮುನ್ನವೇ ಅವರು ನಿಧನರಾಗಿದ್ದಾರೆ.
ಮಹಿಳೆ ಮಂಗಳವಾರ ಬೆಳಗ್ಗೆ 3:00 ಗಂಟೆಗೆ ಸಾವನ್ನಪ್ಪಿದ್ದಾರೆ ಎಂದು ಜಾರ್ಜ್ ಆಸ್ಪತ್ರೆಯ ಅಧೀಕ್ಷಕ ಡಾ.ಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


