ಮಧ್ಯಪ್ರದೇಶ: ಬಸ್, ಟ್ರಕ್ ನಡುವೆ ಅಪಘಾತ; 12 ಮಂದಿ ಸಜೀವ ದಹನ, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರು ಪರಿಹಾರ
ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.

ಗುನ: ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿದ್ದಾರೆ.
ಈ ಘಟನೆ ಗುನ ಜಿಲ್ಲೆಯ ಗುಣ-ಅರೋನ್ ಮಾರ್ಗದಲ್ಲಿ ಸಂಭವಿಸಿದೆ. ಬಸ್ ಹಾಗೂ ಟ್ರಕ್ ನಡುವಿನ ಅಪಘಾತದಲ್ಲಿ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 12 ಪ್ರಯಾಣಿಕರು ಸಜೀವ ದಹನಗೊಂಡು, 17 ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಗುನ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಉಳಿದವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ತರುಣ್ ರಥಿ ತಿಳಿಸಿದ್ದಾರೆ.
ಪ್ರಸ್ತುತ 17 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ, ಬಸ್ ಮತ್ತು ಟ್ರಕ್ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೃತದೇಹಗಳು ಬೆಂಕಿಯಲ್ಲಿ ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು. ಅಪಘಾತ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದೆ. ಅಪಘಾತಕ್ಕೆ ಕಾರಣವನ್ನು ಕಂಡುಹಿಡಿಯಲು ಪರಿಶೀಲನೆ ಡೆಯುತ್ತಿದೆ ಎಂದು ಅವರು ಹೇಳಿದರು. ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


