ಆಂಧ್ರ ಪ್ರದೇಶ ರಾಜಕೀಯಕ್ಕೆ ಮತ್ತೋರ್ವ ಕ್ರಿಕೆಟಿಗ ಎಂಟ್ರಿ: ವೈಎಸ್ ಆರ್ ಕಾಂಗ್ರೆಸ್ ಪಕ್ಷ ಸೇರಿದ ಅಂಬಾಟಿ ರಾಯುಡು!
ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹೈದ್ರಾಬಾದ್: ಭಾರತದ ಮಾಜಿ ಕ್ರಿಕೆಟಿಗ ಅಂಬಾಟಿ ರಾಯುಡು (Ambati Rayudu) ಅವರು ಆಂಧ್ರ ಪ್ರದೇಶದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದು(Andhra Pradesh Politics), ಆಡಳಿತಾರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ವಿಜಯವಾಡದಲ್ಲಿ ಆಂಧ್ರ ಪ್ರದೇಶ ಮುಖ್ಯ ಮಂತ್ರಿ ವೈಎಸ್ ಜಗನ್ ರೆಡ್ಡಿ, ಡೆಪ್ಯುಟಿ ಸಿಎಂ ನಾರಾಯಣ ಸ್ವಾಮಿ, ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಅವರ ಸಮ್ಮುಖದಲ್ಲಿ ಅಂಬಾಟಿ ರಾಯುಡು ವೈಎಸ್‌ಆರ್ ಕಾಂಗ್ರೆಸ್ ಪಾರ್ಟಿಯನ್ನು ಅಧಿಕೃತವಾಗಿ ಸೇರಿದರು.
ಭಾರತೀಯ ಖ್ಯಾತ ಕ್ರಿಕೆಟಿಗ ಅಂಬಾಟಿ ತಿರುಪತಿ ರಾಯುಡು ಅವರು ಮುಖ್ಯಮಂತ್ರಿ ವೈಎಸ್ ಜಗನ್ ಅವರ ಸಮ್ಮುಖದಲ್ಲಿ ಸಿಎಂ ಕ್ಯಾಂಪ್ ಕಚೇರಿಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮತ್ತು ಸಂಸದ ಪೆದ್ದಿರೆಡ್ಡಿ ಮಿಥುನ್ ರೆಡ್ಡಿ ಭಾಗವಹಿಸಿದ್ದರು ಎಂದು ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ನಂತರ ರಾಯುಡು 2023ರಲ್ಲಿ ಕ್ರಿಕೆಟ್‌ನಿಂದ ನಿವೃತ್ತರಾದರು. ಆಂಧ್ರಪ್ರದೇಶ ಮೂಲದ ಅವರು ದೇಶೀಯ ಕ್ರಿಕೆಟ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ. ಟೀಂ ಇಂಡಿಯಾ ಪರ ಕೂಡ ಆಡಿದ್ದರು. 37 ವರ್ಷದ ಅಂಬಾಟಿ ರಾಯುಡು ಅವರು ರಾಜಕಾರಣ ಸೇರುವುದಾಗಿ ಕಳೆದ ಜೂನ್ ತಿಂಗಳಲ್ಲಿ ಘೋಷಣೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


