ದೇಶ

COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

COVID-19: ಕಳೆದ 24 ಗಂಟೆಗಳಲ್ಲಿ 797 ಮಂದಿಗೆ ಕೋವಿಡ್ ಪಾಸಿಟಿವ್, ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 4,091ಕ್ಕೆ ಏರಿಕೆಯಾಗಿದೆ ಎಂದು  ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. 

ಮುಂಜಾನೆ 8 ಗಂಟೆಗೆ ಲಭ್ಯವಾದ ಅಧಿಕೃತ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಐದು ಮಂದಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳದಲ್ಲಿ ಇಬ್ಬರು, ಮಹಾರಾಷ್ಟ್ರ, ಪುದುಚೇರಿ ಮತ್ತು ತಮಿಳುನಾಡು ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಿತು. ಕಳೆದ ನಾಲ್ಕು ವರ್ಷಗಳಲ್ಲಿ ದೇಶದಾದ್ಯಂತ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,50,10,944ಕ್ಕೆ ಏರಿಕೆಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 5,33,351ಕ್ಕೆ ಏರಿದೆ. 

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಸೋಂಕಿನಿಂದ ಚೇತರಿಸಿಕೊಂಡ ಜನರ ಸಂಖ್ಯೆ 4.4 ಕೋಟಿಗೂ ಹೆಚ್ಚಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.