ವಾರಾಂತ್ಯದಲ್ಲಿ ಉತ್ತರ ಭಾರತವನ್ನು ಆವರಿಸಲಿರುವ ದಟ್ಟ ಮಂಜು: ಹವಾಮಾನ ಇಲಾಖೆ
ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.

ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಶನಿವಾರ ಮತ್ತು ಭಾನುವಾರದಂದು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಉತ್ತರ ರಾಜಸ್ಥಾನದ ಕೆಲವು ಭಾಗಗಳಲ್ಲಿ ಶೀತ ದಿನಗಳು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.
ಪಂಜಾಬ್, ಪಶ್ಚಿಮ ಉತ್ತರ ಪ್ರದೇಶದ ಹಲವು ಪ್ರದೇಶಗಳಲ್ಲಿ ದಟ್ಟವಾದ ಮಂಜು ವಾತಾವರಣದಿಂದಾಗಿ ≤50 ಮೀ ವರೆಗೆ ಗೋಚರತೆ ಇರಲಿದೆ. ಈ ವಾತಾವರಣ ಜ.1 ವರೆಗೂ ಹರ್ಯಾಣ, ಚಂಡೀಗಢ, ದೆಹಲಿ, ಪೂರ್ವ ಉತ್ತರ ಪ್ರದೇಶಗಳಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡ್, ಮಧ್ಯಪ್ರದೇಶ, ಉತ್ತರ ರಾಜಸ್ಥಾನ, ಜಾರ್ಖಂಡ್ ಗಳಲ್ಲಿ ಜ.04 ವರೆಗೆ ಬೆಳಗಿನ ಗೋಚರತೆ 50-200 ಮೀ ವರೆಗೆ ಇರಲಿದೆ ಎಂದು ತಿಳಿದುಬಂದಿದೆ. ಭಾನುವಾರ ಮತ್ತು ಜನವರಿ 2 ರಂದು ಗಂಗಾನದಿ ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


