ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮುಂಜಾನೆ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಮುಂಜಾನೆ ಛತ್ರಪತಿ ಸಂಭಾಜಿನಗರದ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸಾವಿಗೀಡಾದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ವಾಲುಜ್ ಕೈಗಾರಿಕಾ ಪ್ರದೇಶದಲ್ಲಿನ ಸನ್‌ಶೈನ್ ಎಂಟರ್‌ಪ್ರೈಸಸ್ ಘಟಕದಲ್ಲಿ ಮಧ್ಯರಾತ್ರಿ 1 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹದಿಮೂರು ಕಾರ್ಮಿಕರು ಒಳಗೆ ಮಲಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೈಗವಸುಗಳನ್ನು ತಯಾರಿಸುವ ಘಟಕದ ಛಾವಣಿಯನ್ನು ಒಡೆದು ಏಳು ಮಂದಿ ಬೆಂಕಿಯಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರೆ. ಇನ್ನುಳಿದ ಆರು ಮಂದಿ ಸಜೀವ ದಹನವಾಗಿದ್ದಾರೆ ಎಂದು ಅವರು ಹೇಳಿದರು.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡುವಂತೆ ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಶಿಂಧೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿಕೆ ತಿಳಿಸಿದೆ.
ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಅಗ್ನಿ ಅವಘಡ: 6 ಮಂದಿ ಸಜೀವ ದಹನ
ಘಟನೆಯಲ್ಲಿನ ಜೀವಹಾನಿಗಾಗಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.
ಬೆಳಗಿನ ಜಾವ 3.30ಕ್ಕೆ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


