ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಸೋಲು
ಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ.

ನಾಗ್ಪುರ: ಪರಿಷತ್ ನ ಶಿಕ್ಷಕರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತವರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ತೀವ್ರ ಮುಖಭಂಗವಾಗಿದೆ.
ನಾಗ್ಪುರ ವಿಭಾಗದ ಶಿಕ್ಷಕರ ಸ್ಥಾನದಲ್ಲಿ ವಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ)ಯ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಸೋಲು ಕಂಡಿದ್ದಾರೆ.
ನಾಗ್ಪುರ ವಿಭಾಗದ ಶಿಕ್ಷಕರ ಕ್ಷೇತ್ರ ಡಿಸಿಎಂ ಫಡ್ನವೀಸ್ ತವರು ಕ್ಷೇತ್ರವಾಗಿದೆ. ಇನ್ನು ಕೊಂಕಣ ವಿಭಾಗದ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜ್ಞಾನೇಶ್ವರ್ ಗೆಲುವು ಸಾಧಿಸಿದ್ದಾರೆ.
ನಾಗ್ಪುರ ಶಿಕ್ಷಕರ ಕ್ಷೇತ್ರದಲ್ಲಿ ಸುಧಾಕರ್ ಅದ್ಬಾಲ್ ಎಂಬ ಎಂವಿಎ ಬೆಂಬಲಿತ ಅಭ್ಯರ್ಥಿ ಗೆಲುವು ಸಾಧಿಸಿದ್ದು ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗೋರಾವ್ ಗನಾರ್ ಪರಾಭವಗೊಂಡಿದ್ದಾರೆ. ನಾಗೋರಾವ್ ಈ ಕ್ಷೇತ್ರದ ಹಾಲಿ ಎಂಎಲ್ ಸಿ ಆಗಿದ್ದರು. ನಾಗ್ಪುರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ತವರು ಪ್ರದೇಶವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


