ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ: ಕೇಂದ್ರ
ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.

ನವದೆಹಲಿ: ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ.
ರಾಜಕೀಯ ಪಕ್ಷಗಳ ಹಣಕಾಸು ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಕಿರಣ್ ರಿಜಿಜು ಅವರು, ಅಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಲಿಖಿತ ಉತ್ತರದಲ್ಲಿ, ದೇಶದಲ್ಲಿ ಅಸ್ತಿತ್ವದಲ್ಲಿರುವ ಚುನಾವಣಾ ಪದ್ಧತಿಗಳನ್ನು ಸುಧಾರಿಸಲು ಸರ್ಕಾರ ಕಾಲಕಾಲಕ್ಕೆ ಚುನಾವಣಾ ಸುಧಾರಣೆಗಳನ್ನು ತರಲು ಕ್ರಮಗಳನ್ನು ಕೈಗೊಂಡಿದೆ ಎಂದು ರಿಜಿಜು ಹೇಳಿದ್ದಾರೆ.
"ಚುನಾವಣಾ ಸುಧಾರಣೆಗಳು ನಿರಂತರ ಪ್ರಕ್ರಿಯೆಯಾಗಿದ್ದು, ದೇಶದಲ್ಲಿ ಅಸ್ತಿತ್ವದಲ್ಲಿರುವ ಚುನಾವಣಾ ಪದ್ಧತಿಗಳನ್ನು ಸುಧಾರಿಸುವ ಸಲುವಾಗಿ, ಭಾರತ ಚುನಾವಣಾ ಆಯೋಗದ ವಿವಿಧ ಪ್ರಸ್ತಾವನೆಗಳನ್ನು ಪರಿಶೀಲಿಸಿದ ನಂತರ ಸರ್ಕಾರ ಕಾಲಕಾಲಕ್ಕೆ ವಿವಿಧ ತಿದ್ದುಪಡಿ ಕಾಯ್ದೆಗಳ ಮೂಲಕ ಅದನ್ನು ಜಾರಿಗೊಳಿಸುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


