ದೇಶ

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ

ಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್‌ ಇಮಾಮ್‌ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ.

ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್‌ರನ್ನು ಬಿಡುಗಡೆ ಮಾಡಿದ ನ್ಯಾಯಾಲಯ
ಶರ್ಜೀಲ್ ಇಮಾಮ್
Published On :

ನವದೆಹಲಿ: ಜಾಮಿಯಾ ಹಿಂಸಾಚಾರ ಪ್ರಕರಣಕ್ಕೆ  ಸಂಬಂಧಿಸಿದಂತೆ ವಿದ್ಯಾರ್ಥಿ ಕಾರ್ಯಕರ್ತರಾದ ಶರ್ಜೀಲ್‌ ಇಮಾಮ್‌ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ ಬಿಡುಗಡೆ ಮಾಡಿದೆ.

2019ರಲ್ಲಿ ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಅವರು ಇಬ್ಬರನ್ನು ಬಿಡುಗಡೆಗೊಳಿಸಿ ಆದೇಶಿಸಿದರು.

ಈ ಕುರಿತು ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.

ಆದಾಗ್ಯೂ, 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಇಮಾಮ್ ಆರೋಪಿಯಾಗಿರುವುದರಿಂದ ಜೈಲಿನಲ್ಲಿಯೇ ಇದ್ದರು. 

ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಇಮಾಮ್‌ ಭಾಗಿಯಾಗಿದ್ದರು ಎಂಬ ಆರೋಪದಡಿ ದೆಹಲಿ ಪೊಲೀಸ್‌ ವಿಶೇಷ ಘಟಕವು 2020ರ ಆಗಸ್ಟ್‌ 25ರಂದು ಅವರನ್ನು ಬಂಧಿಸಿತ್ತು. 

ಫೆಬ್ರುವರಿ 24ರಂದು ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರು ಹಾಗೂ ಕಾಯ್ದೆಯ ಪರ ಇದ್ದವರ ನಡುವೆ ನಡೆದಿದ್ದ ಕೋಮುಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.