ದೇಶ

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ 

ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ ಸಿಆರ್ ಪಿಎಫ್ ಎಎಸ್ ಐ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಮೃತರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದೆ.

ಗುಪ್ತಚರ ಬ್ಯೂರೋ ನಿರ್ದೇಶಕರ ನಿವಾಸದಲ್ಲಿ ಗಾರ್ಡ್ ಆಗಿ ಅವರನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು, ನಂತರ ಅವರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.