ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 128 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,792ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 128 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 1,792ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ವೇಳೆ ಕೇರಳದಲ್ಲಿ ಒಂದು ಸಾವು ಸೇರಿದಂತೆ ದೇಶದಾದ್ಯಂತ ಈವರೆಗೆ 5,30,745 ಮಂದಿ ಸಾವಿಗೀಡಾಗಿದ್ದಾರೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,83,250ಕ್ಕೆ ಏರಿಕೆಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 0.09ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.07ರಷ್ಟಿದೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಇದೇ ವೇಳೆ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದ್ದು, ದೇಶದಲ್ಲಿ ಈವರೆಗೆ 4,41,50,713 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸಚಿವಾಲಯದ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೂ 220.56 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


