ಬಿಹಾರದಲ್ಲಿ ಎರಡು ಕಿ.ಮೀ ರೈಲು ಹಳಿ ಕಳ್ಳತನ, ರೈಲ್ವೆ ರಕ್ಷಣಾ ಪಡೆಯ ಇಬ್ಬರು ನೌಕರರ ಅಮಾನತು
ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದ ಸಮಸ್ತಿಪುರ್ ಜಿಲ್ಲೆಯಲ್ಲಿ ಅಪರಿಚಿತ ಕಳ್ಳರು ಎರಡು ಕಿಮೀ ಉದ್ದದ ರೈಲ್ವೆ ಹಳಿಯನ್ನು ಕದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕದ್ದ ಟ್ರ್ಯಾಕ್ ಲೋಹತ್ ಸಕ್ಕರೆ ಕಾರ್ಖಾನೆಯನ್ನು ಪಂಡೌಲ್ ರೈಲು ನಿಲ್ದಾಣದೊಂದಿಗೆ ಸಂಪರ್ಕಿಸುತ್ತಿತ್ತು. ಕಳೆದ ಕೆಲವು ವರ್ಷಗಳಿಂದ ಸಕ್ಕರೆ ಕಾರ್ಖಾನೆ ಸ್ಥಗಿತಗೊಂಡಿದ್ದರಿಂದ ಈ ಮಾರ್ಗದಲ್ಲಿ ಸಂಚಾರವೇ ಇರಲಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ರೈಲ್ವೆ ರಕ್ಷಣಾ ಪಡೆಯ ನೌಕರರನ್ನು ಅಮಾನತುಗೊಳಿಸಲಾಗಿದೆ.
ಈ ಬಗ್ಗೆ ತನಿಖೆ ನಡೆಸಲು ಸಮಸ್ತಿಪುರ ಡಿಆರ್‌ಎಂ ತಂಡವನ್ನು ರಚಿಸಿದ್ದಾರೆ. ಆರ್‌ಪಿಎಫ್ ಸಿಬ್ಬಂದಿಯೊಂದಿಗೆ ಸೇರಿಕೊಂಡೇ ಕಳ್ಳತನ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆ ರಸ್ತೆಯಲ್ಲಿ ಯಾವುದೇ ಚಲನವಲನ ಇಲ್ಲದ ಕಾರಣ, ಕಳ್ಳರು ಟ್ರ್ಯಾಕ್ ಅನ್ನು ಕದ್ದು ಸ್ಕ್ರ್ಯಾಪ್ ಡೀಲರ್‌ಗಳಿಗೆ ಮಾರಾಟ ಮಾಡಿದ್ದಾರೆ. ಬಿಹಾರದಲ್ಲಿ ರೈಲ್ವೇ ಸ್ಕಾರ್ಪ್‌ಗಳ ಕಳ್ಳತನವು ನಿತ್ಯದ ಸಂಗತಿಯಾಗಿದೆ. ಆದರೆ, ಬಹುಶಃ 2 ಕಿಮೀ ಹಳಿಯನ್ನು ಕಳವು ಮಾಡಿರುವುದು ಇದೇ ಮೊದಲು.
ಈ ಸಂಬಂಧ ಆರ್‌ಪಿಎಫ್‌ನಿಂದ ಎಫ್ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


