ದೇಶ

ಶ್ರದ್ಧಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು, ಹಲವರ ಜತೆ ಡೇಟಿಂಗ್ ನಡೆಸಿದ್ದ ಆರೋಪಿ

ತನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಆರೋಪಿ ತನ್ನ ಪ್ರಿಯತಮೆಯ...

ಶ್ರದ್ಧಾ ಕೊಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ದೆಹಲಿ ಪೊಲೀಸರು, ಹಲವರ ಜತೆ ಡೇಟಿಂಗ್ ನಡೆಸಿದ್ದ ಆರೋಪಿ
ಶ್ರದ್ಧಾ ವಾಕರ್
Published On :

ನವದೆಹಲಿ: ತನ್ನ ಜೊತೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ ಆಫ್ತಾಬ್ ಪೂನಾವಾಲಾ ವಿರುದ್ಧ ದೆಹಲಿ ಪೊಲೀಸರು ಮಂಗಳವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಆರೋಪಿ ತನ್ನ ಪ್ರಿಯತಮೆಯ ಶವವನ್ನು ಹೇಗೆ ವಿಲೇವಾರಿ ಮಾಡಿದ ಎಂಬ ವಿವರಗಳನ್ನು ಉಲ್ಲೇಖಿಸಲಾಗಿದೆ.

ದೆಹಲಿ ಪೊಲೀಸರು ಸಲ್ಲಿಸಿರುವ 6,636 ಪುಟಗಳ ಚಾರ್ಜ್‌ಶೀಟ್ ಪ್ರಕಾರ, ಪೂನಾವಾಲಾ ಶ್ರದ್ಧಾ ತಲೆ ಮತ್ತು ಮುಂಡವನ್ನು ಬ್ಲೋ ಟಾರ್ಚ್ ಬಳಸಿ ಸುಟ್ಟು ವಿರೂಪಗೊಳಿಸಿದ್ದಾನೆ. ಅಲ್ಲದೆ ಮಾರ್ಬಲ್ ಗ್ರೈಂಡರ್ ಬಳಸಿ ಆಕೆಯ ಮೂಳೆಗಳನ್ನು ಪುಡಿಪುಡಿ ಮಾಡಿದ್ದಾನೆ.

2022 ರ ನವೆಂಬರ್ 12 ರಂದು ಅಫ್ತಾಬ್ ನನ್ನು ಬಂಧಿಸಿದ 73 ದಿನಗಳ ನಂತರ ಇಂದು ಆರೋಪಪಟ್ಟಿ ಸಲ್ಲಿಸಲಾಗಿದ್ದು, ಆರೋಪಿ ಆ್ಯಪ್ ಮೂಲಕ ಹಲವು ಮಹಿಳೆಯರೊಂದಿಗೆ ಡೇಟಿಂಗ್ ನಡೆಸುತ್ತಿದ್ದ ಎಂದು ಹೇಳಲಾಗಿದೆ.

ಶ್ರದ್ಧಾಳ ದೇಹದ ಭಾಗಗಳು ಫ್ರಿಡ್ಜ್‌ನಲ್ಲಿರುವಾಗಲೇ ಮಹಿಳೆಯೊಬ್ಬರನ್ನು ಮನೆಗೆ ಕರೆತಂದಿದ್ದ ಆರೋಪಿ, ಆ ಭಾಗಗಳನ್ನು ಫ್ರಿಡ್ಜ್‌ನಿಂದ ತೆಗೆದು ಇತರ ಕಡೆ ಅಡಗಿಸಿಟ್ಟಿದ್ದ ಎಂದೂ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತಿಳಿಸಿದ್ದಾರೆ.

ಇತರ ಮಹಿಳೆಯರೊಂದಿಗೆ ಸಂಬಂಧವಿರುವ ಬಗ್ಗೆ ಆಫ್ತಾಬ್‌ನನ್ನು ಶ್ರದ್ಧಾ ಪ್ರಶ್ನಿಸುತ್ತಿದ್ದಳು. ಇದರಿಂದ ಅವರಿಬ್ಬರ ಸಂಬಂಧ ಹಳಸಿತ್ತು. ಆಕೆಯ ಹತ್ಯೆ ಬಳಿಕ ಆಫ್ತಾಬ್ ‘ಬಂಬಲ್‌’ ಆ್ಯಪ್ ಮೂಲಕ ಹಲವು ಹುಡುಗಿಯರೊಂದಿಗೆ ಸಂಪರ್ಕಕ್ಕೆ ಬಂದಿದ್ದ. ಒಮ್ಮೆ ಮನೋರೋಗ ತಜ್ಞೆಯೊಬ್ಬರ ಸಂಪರ್ಕಕ್ಕೆ ಬಂದಿದ್ದ ಆತ, ಆಕೆಯನ್ನು ತನ್ನ ಫ್ಲ್ಯಾಟ್‌ಗೂ ಕರೆತಂದಿದ್ದ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.