ಕೇಂದ್ರ ಸರ್ಕಾರದಿಂದ ಅದಾನಿ ರಕ್ಷಣೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.
ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತಾ ನಿರ್ಣಯದ ಹಿಂದಿನ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರ ಉತ್ತರದಿಂದ ತಾವು ತೃಪ್ತರಾಗಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, 'ಪ್ರಧಾನಿ ಭಾಷಣದಿಂದ ನನಗೆ ತೃಪ್ತಿ ಇಲ್ಲ. ಆದರೆ, ಅದು ಸತ್ಯವನ್ನು ಬಹಿರಂಗಪಡಿಸಿದ್ದು, ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ' ಎಂದು ಹೇಳಿದರು.
ಬುಧವಾರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮುಗಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಪ್ರಧಾನಿ ಭಾಷಣದಿಂದ ನನಗೆ ತೃಪ್ತಿ ಇಲ್ಲ. ಆದರೆ, ಅದು ಸತ್ಯವನ್ನು ಬಹಿರಂಗಪಡಿಸಿದೆ. ಅವರ ಭಾಷಣದಲ್ಲಿ ಅದಾನಿ ಗ್ರೂಪ್ ಬಗ್ಗೆ ವಿಚಾರಣೆಯ ಬಗ್ಗೆ ಏನೂ ಹೇಳಲಿಲ್ಲ. ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಗೌತಮ್ ಅದಾನಿ ಅವರನ್ನು ರಕ್ಷಿಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ನಾವು ಎತ್ತಿರುವ ಯಾವುದೇ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಲಿಲ್ಲ ಎಂದು ವಯನಾಡ್ ಸಂಸದರೂ ಕೂಡ ಆಗಿರುವ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದನ್ನೂ ಓದಿ: ಲೋಕಸಭೆಯಲ್ಲಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
"ಪ್ರಧಾನಿ, ತಮ್ಮ ಭಾಷಣದಲ್ಲಿ' ಯಾವುದೇ (ಅವರ) ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಅವರು ಶೆಲ್-ಶಾಕ್ ಆಗಿದ್ದರು. ನಾನು ಯಾವುದೇ ಕಠಿಣ ಪ್ರಶ್ನೆಗಳನ್ನು ಎತ್ತಲಿಲ್ಲ. ಸರಳವಾದ ಪ್ರಶ್ನೆಗಳನ್ನು ಅವರು ತಪ್ಪಿಸಿಕೊಂಡರು. ಪ್ರಧಾನಿ ಮೋದಿ ಅವರು ಗೌತಮ್ ಅದಾನಿ ಅವರೊಂದಿಗೆ ಸ್ನೇಹಿತರಾಗದಿದ್ದರೆ, ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲಿ ಅವರ ವ್ಯವಹಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಬೇಕಿತ್ತು. ಆದರೆ ಅಂತಹ ಒಂದೇ ಒಂದು ಶಬ್ಧ ಕೂಡ ಅವರು ಬರಲಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


