ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಜಾಮಿಯಾ ವಿವಿ ಸಹಾಯಕ ಪ್ರಾಧ್ಯಾಪಕ ಅಮಾನತು
ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಹಿರಿಯ...

ನವದೆಹಲಿ: ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ರಿಜಿಸ್ಟ್ರಾರ್ ನಜೀಮ್ ಹುಸೇನ್ ಜಾಫ್ರಿ ಮಂಗಳವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ವಿಚಾರಣೆ ಪೂರ್ಣಗೊಳ್ಳುವವರೆಗೆ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕ್ಯಾಂಪಸ್‌ನಿಂದ ಹೊರಹೋಗದಂತೆ ಸಹಾಯಕ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ.
ಮ್ಯಾನೇಜ್ ಮೆಂಟ್ ಸ್ಟಡೀಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್ ವೀರಮಣಿ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸುತ್ತಿದೆ ಎಂದು ವಿಶ್ವವಿದ್ಯಾಲಯದ ಅಧಿಸೂಚನೆ ತಿಳಿಸಿದೆ.
"ವೀರಮಣಿ ಅವರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಇದೆ. ಇದು ಗಂಭೀರ ವಿಷಯವಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಲಾಗಿದೆ" ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿಯ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಅವಧಿಯಲ್ಲಿ, ಅವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಪ್ರಧಾನ ಕಛೇರಿಯನ್ನು ಬಿಟ್ಟು ಹೋಗಬಾರದು" ಎಂದು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


