ಹೊಸ ವಂದೇ ಭಾರತ್ ರೈಲು ಥಾಣೆಯಲ್ಲಿ ನಿಲುಗಡೆಗೆ ಸೇನಾ ಸಂಸದ ಒತ್ತಾಯ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿರುವ ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಥಾಣೆ ನಿಲ್ದಾಣದಲ್ಲಿ ನಿಲ್ಲಿಸಬೇಕು ಎಂದು ಶಿವಸೇನೆ-ಉದ್ಧವ್ ಬಾಲ್ ಠಾಕ್ರೆಯ ಸಂಸದ ರಾಜನ್ ವಿಚಾರೆ ಅವರು....

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿರುವ ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಥಾಣೆ ನಿಲ್ದಾಣದಲ್ಲಿ ನಿಲ್ಲಿಸಬೇಕು ಎಂದು ಶಿವಸೇನೆ-ಉದ್ಧವ್ ಬಾಲ್ ಠಾಕ್ರೆಯ ಸಂಸದ ರಾಜನ್ ವಿಚಾರೆ ಅವರು ಒತ್ತಾಯಿಸಿದ್ದಾರೆ.
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಾದ ಮುಂಬೈ-ಸೋಲಾಪುರ ಮತ್ತು ಮುಂಬೈ-ಸಾಯಿನಗರ ಶಿರಡಿಗೆ ಚಾಲನೆ ನೀಡಿದ್ದರು.
ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಥಾಣೆ ಸಂಸದ ವಿಚಾರೆ, ಹೊಸ ವಂದೇ ಭಾರತ್ ರೈಲು ಥಾಣೆ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡುವಂತೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ನರೇಶ್ ಲಾಲ್ವಾನಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ಪ್ರತಿನಿತ್ಯ ಏಳು ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಥಾಣೆ ರೈಲು ನಿಲ್ದಾಣವನ್ನು ಬಳಸುತ್ತಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


