ನಿಗದಿಯಂತೆಯೇ ಮಾ.5 ಕ್ಕೆ ಎನ್ಇಇಟಿ-ಪಿಜಿ ಪರೀಕ್ಷೆ: ಮಾಂಡವೀಯ
ಎನ್ಇಇಟಿ-ಪಿ ಜಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಸಂಘಗಳು ಹಾಗೂ ವೈದ್ಯರ ಬೇಡಿಕೆಗೆ ಪೂರ್ಣವಿರಾಮ ಹಾಕಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿದೆ ಎಂದು ತಿಳಿಸಿದ್ದಾರೆ.

ನವದೆಹಲಿ: ಎನ್ಇಇಟಿ-ಪಿ ಜಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಸಂಘಗಳು ಹಾಗೂ ವೈದ್ಯರ ಬೇಡಿಕೆಗೆ ಪೂರ್ಣವಿರಾಮ ಹಾಕಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿದೆ ಎಂದು ತಿಳಿಸಿದ್ದಾರೆ.
ಯಾರೂ ಬಿಟ್ಟುಹೋಗಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಕ್ಕೆ ಸಚಿವಾಲಯ ಇಂಟರ್ನ್ಶಿಪ್ ಮಾಡುತ್ತಿರುವ ಎಲ್ಲಾ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗಡುವು ದಿನಾಂಕವನ್ನು ವಿಸ್ತರಿಸಿತ್ತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೋಯ್ ಅವರ ಪ್ರಶ್ನೆಗೆ ಮನ್ಸುಖ್ ಮಾಂಡವೀಯ ಲೋಕಸಭೆಯಲ್ಲಿ ತಿಳಿಸಿದ್ದಾರೆ.
ಎನ್ಇಇಟಿ-ಪಿಜಿ 2023 ಪರೀಕ್ಷೆಗಳನ್ನು ಕೆಲವು ತಿಂಗಳುಗಳ ಕಾಲ ಮುಂದೂಡುವ ವಿದ್ಯಾರ್ಥಿಗಳ ಬೇಡಿಕೆಯ ಬಗ್ಗೆ ಸಚಿವಾಲಯದ ನಿಲುವನ್ನು ಸ್ಪಷ್ಟಪಡಿಸುವಂತೆ ಪ್ರಶ್ನೋತ್ತರ ಕಲಾಪದಲ್ಲಿ ಕೇಳಿದರು.
ಮಾ.05 ರಂದು ಪರೀಕ್ಷೆ ನಡೆಯಲಿದೆ ಹಾಗೂ ಇದು 5 ತಿಂಗಳ ಹಿಂದೆಯೇ ನಿಗದಿಯಾಗಿತ್ತು. ಯಾವೆಲ್ಲಾ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯಬೇಕಿದೆಯೋ ಅವರೆಲ್ಲರೂ ಅದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


