ಬಜೆಟ್ ಅಧಿವೇಶನ: ನಾಳೆ ಪ್ರತಿಪಕ್ಷಗಳ ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಸಮಾನ ಮನಸ್ಕ ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ.

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ "ಸಮಾನ ಮನಸ್ಕ" ಪ್ರತಿಪಕ್ಷಗಳ ಸಭೆ ಕರೆದಿದ್ದಾರೆ.
ರಾಜ್ಯಸಭೆ ಕಲಾಪ ಆರಂಭಕ್ಕೂ ಮುನ್ನ ಸಂಸತ್ತಿನಲ್ಲಿರುವ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಯಲಿದೆ.
ನಾಳೆ ರಾಜ್ಯಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಾರ್ಯತಂತ್ರವನ್ನು ರೂಪಿಸಲು ಈ ಸಭೆ ಕರೆಯಲಾಗಿದೆ ಎಂದು ನಂಬಲಾಗಿದೆ.
ಅಮೆರಿಕ ಮೂಲದ ಹೂಡಿಕೆ ಸಂಶೋಧನಾ ಸಂಸ್ಥೆ ಹಿಂಡನ್‌ಬರ್ಗ್ ರಿಸರ್ಚ್ ವರದಿ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್‌ನ ವ್ಯವಹಾರಗಳ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ''ಅದಾನಿ ಹಗರಣದ ಬಗ್ಗೆ ತನಿಖೆ ನಡೆಸಬೇಕಲ್ಲವೇ? ಜೆಪಿಸಿಗೆ ವಿಷಯ ತಿಳಿಸಬೇಕಲ್ಲವೇ? ಸಾರ್ವಜನಿಕ ವಲಯದ ಬ್ಯಾಂಕ್ ಗಳು ಅದಾನಿ ಗ್ರೂಪ್ ನಲ್ಲಿ ಹೂಡಿಕೆ ಮಾಡಿರುವ ಹಣದ ಬಗ್ಗೆ ಚರ್ಚೆ ಬೇಡವೇ? ಸಾರ್ವಜನಿಕರ ಹಣ ಇದರಲ್ಲಿ ಸೇರಿದೆ, ಅದಾನಿ ಗ್ರೂಪ್ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಏನು ಸಮಸ್ಯೆ? ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಅವರು ಅದಾನಿ ಸಮೂಹದ ಏಜೆಂಟರಂತೆ ವರ್ತಿಸಿದ್ದಾರೆ ಎಂದು ಖರ್ಗೆ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


