ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಗೆ ತೀವ್ರ ಅನಾರೋಗ್ಯ; ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್ ಲಿಫ್ಟ್
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ...

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನ್ಯುಮೋನಿಯಾನಿಂದ ಬಳಲುತ್ತಿರುವ ಉಮ್ಮನ್ ಚಾಂಡಿ ಅವರನ್ನು ಚಿಕಿತ್ಸೆಗಾಗಿ ಸಮೀಪದ ನೆಯ್ಯಟ್ಟಿಂಕರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನೆಯ್ಯಟ್ಟಿಂಕರ ಖಾಸಗಿ ಆಸ್ಪತ್ರೆಯಲ್ಲಿ ನನ್ನ ಚಿಕಿತ್ಸೆಗೆ ಸಂಬಂಧಿಸಿದ ವಿವಾದಗಳಿಗೆ ಯಾವುದೇ ಆಧಾರವಿಲ್ಲ ಎಂದು ಚಾಂಡಿ ಅವರು ದುರ್ಬಲ ಧ್ವನಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅವರ ಪತ್ನಿ, ಇಬ್ಬರು ಪುತ್ರಿಯರು ಮತ್ತು ಮಗ ಚಾಂಡಿ ಉಮ್ಮನ್ ಅವರು ಹಿರಿಯ ನಾಯಕರೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ.
79 ವರ್ಷದ ಚಾಂಡಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಶನಿವಾರ ಹೇಳಿದ್ದರು. ಇದಕ್ಕೂ ಮುನ್ನ ಅವರ ಹದಗೆಟ್ಟ ಆರೋಗ್ಯದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ಕಳವಳ ವ್ಯಕ್ತವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


