ತಿರುವನಂತಪುರಂ: ಕೇಂದ್ರ ಸಚಿವ ವಿ. ಮುರಳೀಧರನ್ ಮನೆ ಮೇಲೆ ದಾಳಿ, ವ್ಯಕ್ತಿ ಬಂಧನ
ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ತಿರುವನಂತಪುರಂ: ಕೇಂದ್ರ ಸಚಿವ ವಿ.ಮುರಳೀಧರನ್ ಅವರ ಮನೆ ಮೇಲೆ ಗುರುವಾರ ದಾಳಿ ನಡೆಸಿದ ಆರೋಪದ ಮೇರೆಗೆ 45 ವರ್ಷದ ವ್ಯಕ್ತಿಯೊಬ್ಬನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ಬಂಧಿಸಲಾಗಿರುವ ವ್ಯಕ್ತಿಯನ್ನು ಕೆ. ವಿ ಮನೋಜ್ ಎಂದು ಗುರುತಿಸಲಾಗಿದೆ. ಈತ ಹೋಟೆಲ್ ವೊಂದರ ಮಾಜಿ ನೌಕರನಾಗಿದ್ದು, ಕೇರಳದ ಪಯ್ಯನೂರು ಗ್ರಾಮದ ನಿವಾಸಿ ಎನ್ನಲಾಗಿದೆ. ಆರೋಪಿ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ತಿರುವನಂತಪುರಂ ರೈಲು ನಿಲ್ದಾಣದ ಬಳಿ ಕಸ್ಟಡಿಗೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಮನೋಜ್ ಸಮಸ್ಯೆಗೆ ಕೇಂದ್ರ ಸಚಿವರು ಪರಿಹಾರ ದೊರಕಿಸದ ಹಿನ್ನೆಲೆಯಲ್ಲಿ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿನ ಕಿಟಕಿ, ಗಾಜುಗಳಿಗೆ ಹಾನಿಯುಂಟು ಮಾಡಲಾಗಿದೆ. ದಾಳಿ ವೇಳೆ ಯಾವುದೇ ಕಳ್ಳತನದ ಪ್ರಯತ್ನ ನಡೆದಿಲ್ಲ. ಮನೆಯಲ್ಲಿ ಯಾವುದೇ ಬೆಲೆಬಾಳುವ ವಸ್ತುಗಳು ಕಾಣೆಯಾದ ಬಗ್ಗೆ ವರದಿಯಾಗಿಲ್ಲ ಮತ್ತು ಯಾವುದೇ ಪ್ರಯತ್ನಗಳನ್ನು ಮಾಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ದಾಳಿಯ ನಂತರ ಮನೋಜ್ ಮನೆಯಿಂದ ಹೊರಬಂದಿರುವುದು ಪೊಲೀಸರಿಗೆ ಕಂಡುಬಂದಿದೆ. ದಾಳಿ ವೇಲೆ ಉಳ್ಳೂರಿನ ಮನೆಯ ಮುಂಭಾಗದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಿಟಕಿಯ ಗಾಜುಗಳನ್ನು ಗುರಿಯಾಗಿಸಲು ಬಳಸಲಾದ ಕಲ್ಲು ಮತ್ತು ರಕ್ತದ ಕಲೆಗಳನ್ನು ಪೊಲೀಸರು ಸ್ಥಳದಲ್ಲಿ ವಶಕ್ಕೆ ಪಡೆದಿದ್ದಾರೆ.
ಘಟನೆ ನಡೆದಾಗ ಸಚಿವರು ಮನೆಯಲ್ಲಿ ಇರಲಿಲ್ಲ. ಮುರಳೀಧರನ್ ಅವರು ತಿರುವನಂತಪುರಂನಲ್ಲಿರುವಾಗ ಸಾಮಾನ್ಯವಾಗಿ ಈ ಮನೆಯಲ್ಲಿಯೇ ಇರುತ್ತಾರೆ ಮತ್ತು ಅವರ ಕಚೇರಿಯು ಮನೆಯ ಹಿಂಭಾಗದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


