ಲೋಕಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಅಸಂಸದೀಯ ಹೇಳಿಕೆ; ರಾಹುಲ್ ವಿರುದ್ಧ ಕ್ರಮ: ಪ್ರಲ್ಹಾದ್ ಜೋಶಿ
ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಂಸದೀಯ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ನವದೆಹಲಿ: ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಂಸದೀಯ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಬಿಜೆಪಿ ಮುಖಂಡ ನಿಶಿಕಾಂತ್ ದುಬೆ ನೋಟಿಸ್ ನೀಡಿದ್ದಾರೆ. ರಾಹುಲ್ ಗಾಂಧಿ ಮಾಡಿರುವ ಆರೋಪಗಳಿಗೆ ಸಾಕ್ಷ್ಯಧಾರವಿರುಬೇಕು, ಆದರೆ, ಅವರು ಯಾವುದೇ ಸಾಕ್ಷ್ಯಧಾರ ತೋರಿಸುತ್ತಿಲ್ಲ. ನಾವು ದೇಶದ ಜನತೆಗೆ ಉತ್ತರ ನೀಡಬೇಕಾಗಿದೆ. ಈ ಬಾರಿ ನೋಟಿಸ್ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಜೋಶಿ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ನೀಡಿರುವ ಅವಹೇಳನಕಾರಿ, ಅಸಂಸದೀಯ, ಹಾದಿ ತಪ್ಪಿಸುವ ಹೇಳಿಕೆ ಸದನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಘನತೆಗೆ ಧಕ್ಕೆ ತಂದಿರುವುದಾಗಿ ದುಬೆ ಫೆಬ್ರವರಿ 8 ರಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಳುಹಿಸಿರುವ ನೋಟಿಸ್ ನಲ್ಲಿ ಆರೋಪಿಸಲಾಗಿದೆ.
ಹಿಡನ್ ಬರ್ಗ್- ಅದಾನಿ ವಿವಾದದ ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದ ದಿನಗಳಿಂದಲೂ ಗೌತಮ್ ಅದಾನಿ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಮೋದಿ 2014ರಲ್ಲಿ ಪ್ರಧಾನಿಯಾದ ನಂತರ ಅದಾನಿ ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 609ರಿಂದ ನಂಬರ್ 2 ಸ್ಥಾನಕ್ಕೇರಿದರು ಎಂದು ರಾಹುಲ್ ಆರೋಪಿಸಿದರು. ರಾಹುಲ್ ಆರೋಪ ವಿರುದ್ಧ ಬಿಜೆಪಿ ಲೋಕಸಭೆ ಹಾಗೂ ಹೊರಗಡೆ ಪ್ರತಿಭಟನೆ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


