ಅಸ್ಸಾಂ ರಾಜ್ಯಪಾಲರಾಗಿ ಕಟಾರಿಯಾ: ವಸುಂದರಾ ರಾಜೇ ಮೈನ್ ಸ್ಟ್ರೀಮ್ ರಾಜಕೀಯ? ರಾಜಸ್ತಾನ ವಿಪಕ್ಷ ನಾಯಕರಾಗ್ತಾರಾ ಮಾಜಿ ಸಿಎಂ!
ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು.

ಜೈಪುರ: ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂ ರಾಜ್ಯಪಾಲರಾಗಿ ಭಾನುವಾರ ನೇಮಕಗೊಂಡಿದ್ದಾರೆ. ಎಂಟು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿರುವ ಕಟಾರಿಯಾ ಅವರು ಈ ಹಿಂದೆ ರಾಜಸ್ಥಾನ ಬಿಜೆಪಿ ಅಧ್ಯಕ್ಷರೂ ಆಗಿದ್ದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಯೋಗಕ್ಷೇಮ ವಿಚಾರಿಸಲು ಕರೆ ಮಾಡಿದ್ದರು, ಆದರೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ಆದಾಗ್ಯೂ, ಕರೆ ಮೂಲಕ ಕಟಾರಿಯಾಗೆ ಸೂಚನೆ ನೀಡಲಾಗಿತ್ತು ಎಂದು ನಂಬಲಾಗಿದೆ. ದಕ್ಷಿಣ ರಾಜಸ್ಥಾನದ ಆರ್‌ಎಸ್‌ಎಸ್ ಬೆಂಬಲಿತ ನಾಯಕ ಕಟಾರಿಯಾ ಅವರು ಅಂತಹ ನಿರೀಕ್ಷೆಯನ್ನು ಹೊಂದಿರಲಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪ್ರತಿಪಕ್ಷದ ಉಪ ನಾಯಕ ರಾಜೇಂದ್ರ ರಾಥೋಡ್ ಮತ್ತು ಇತರ ನಾಯಕರು ಕಟಾರಿಯಾ ಅವರನ್ನು ರಾಜ್ಯಪಾಲರನ್ನಾಗಿ ಮಾಡಿದ್ದಕ್ಕಾಗಿ ಅಭಿನಂದಿಸಿದ್ದಾರೆ.
ಚುನಾವಣಾ ವರ್ಷದಲ್ಲಿ ಯುವ ಪೀಳಿಗೆಗೆ ನಾಯಕತ್ವದ ಅಧಿಕಾರವನ್ನು ನೀಡುವಲ್ಲಿ ಈ ಕ್ರಮವು ಉತ್ತಮವಾಗಿ ಕಂಡುಬರುತ್ತದೆ. ಆದರೆ, ಈಗ ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಯಾರಾಗುತ್ತಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ. ಸದ್ಯ ವಿಧಾನಸಭೆ ಕಲಾಪ ನಡೆಯುತ್ತಿರುವುದರಿಂದ ಬಜೆಟ್‌ಗೆ ಉತ್ತರ ನೀಡಬೇಕಿದೆ. ಹೀಗಿರುವಾಗ ಇಂದು ಅಥವಾ ನಾಳೆ ವಿರೋಧ ಪಕ್ಷದ ನಾಯಕರ ಹೆಸರು ಘೋಷಣೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಆರ್‌ಎಸ್‌ಎಸ್ ಬೆಂಬಲಿತ ಕಟಾರಿಯಾ ಅವರು ಮಾಜಿ ಸಿಎಂ ವಸುಂಧರಾ ರಾಜೆ ಅವರಿಗೆ ಪರ್ಯಾಯವಾಗಿ ಕಾಣಿಸಿಕೊಂಡಿದ್ದರು. ಇದು ರಾಜ್ಯದ ಮುಖ್ಯವಾಹಿನಿಯ ರಾಜಕೀಯದಲ್ಲಿ ರಾಜೇ ಅವರ ಪುನರ್ವಸತಿಗೆ ಕಾರಣವಾಗಬಹುದೇ ಎಂದು ಈಗ ರಾಜಕೀಯ ವಲಯಗಳಲ್ಲಿ ಚರ್ಚೆಯ ವಿಷಯವಾಗಿದೆ. ರಾಜೇ ಅವರಲ್ಲದೆ, ವಿರೋಧ ಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್, ಮಾಜಿ ಅಸೆಂಬ್ಲಿ ಸ್ಪೀಕರ್ ಕೈಲಾಶ್ ಮೇಘವಾಲ್ ಸೇರಿದಂತೆ ಅನೇಕ ನಾಯಕರು ಎಲ್‌ಒಪಿ ರೇಸ್‌ನಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


